ಮುಸಲ್ಮಾನ ದೊರೆಗಳೇ ರಾಮ ಮಂದಿರ ನಿರ್ಮಾಣ ಮಾಡಿದ್ದು!

IMG-20230308-WA0026.jpg
Published on


ಬೆಳಗಾವಿ: ಕಾಂಗ್ರೆಸ್ ನವರು ಭಾರತ ಅಂತಾ ಹೆಸರು ಕೊಟ್ಟಿದೆ ಮುಸಲ್ಮಾನ ದೊರೆಗಳು ಅಂತಾ ಹೇಳಿದ್ರೂ ಅಚ್ಚರಿ ಇಲ್ಲಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.‌ರವಿ ವಾಗ್ದಾಳಿ ನಡೆಸಿದರು.
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು., ಉಡುಪಿ ಕೃಷ್ಣ ಮಠ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಎಂಬ ಹೇಳಿಕೆ ವಿಚಾರ‌ಕ್ಕೆ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬರೀ ಕೃಷ್ಣ ಮಠ ಅಲ್ಲಾ ಭಾರತ ಅಂತಾ ಹೆಸರು ಕೊಟ್ಟಿದ್ದು ಮುಸಲ್ಮಾನ ದೊರೆಗಳು.
ಮುಸಲ್ಮಾನ ದೊರೆಗಳೇ ರಾಮ ಮಂದಿರ ನಿರ್ಮಾಣ ಮಾಡಿದ್ದು.
ಮುಸಲ್ಮಾನ ದೊರೆಗಳೇ ಕಾಶಿ ವಿಶ್ವನಾಥನ ಪ್ರತಿಷ್ಠಾಪನೆ ಮಾಡಿದ್ದು ಅಂತಾ ಹೇಳಿದ್ರೂ ಅಚ್ಚರಿ ಪಡಬೇಕಿಲ್ಲ.ಸುಳ್ಳು ಮತ್ತು ಕಾಂಗ್ರೆಸ್ ಒಂದು ನಾಣ್ಯದ ಮುಖಗಳು.ಸುಳ್ಳನ ಸತ್ಯದ ರೀತಿಯಲ್ಲಿ ಹೇಳುವುದು ಅವರಿಗಿರುವ ಕಾಯಿಲೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net