ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಸಿಎ ಓರಿಯೆಂಟೇಶನ್ ಕಾರ್ಯಕ್ರಮ

orientation
ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ ಸಿಎ ಪುನಶ್ಚೇತನ ಕಾರ್ಯಕ್ರಮದಲ್ಲಿ ಸಿಎ ಗೋಪಾಲಕೃಷ್ಣ ಭಟ್ ಅವರನ್ನು ಗೌರವಿಸಲಾಯಿತು
Published on

ಗಂಗೊಳ್ಳಿ: ವಿದ್ಯಾರ್ಥಿಗಳಿಗೆ ಅಂಕಗಳಿಗಿಂತ ಕೌಶಲ ಮುಖ್ಯ. ಮನಸ್ಸಿನಲ್ಲಿ ಕೀಳರಿಮೆ ಬೆಳಸಿಕೊಳ್ಳದೆ ಸಾಧನೆ ಜೀವನ ನಿಮ್ಮದಾಗಬೇಕು ಎಂದು ಸಿಎ ಗೋಪಾಲಕೃಷ್ಣ ಭಟ್ ಹೇಳಿದರು.

ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶನಿವಾರ ಸಿಎ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ಕೋರ್ಸ್ ಕುರಿತು ಮಾಹಿತಿ ನೀಡಿ ಮಾತನಾಡಿದರು.

ಸಂಸ್ಥೆ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥೆ ಲತಾ ಪೈ ಉಪಸ್ಥಿತರಿದ್ದರು.

ಲೆಕ್ಕಶಾಸ್ತ್ರ ಶಿಕ್ಷಕ ಸುಶಾಂತ್ ನಾಯಕ್ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಶಿಕ್ಷಕಿ ನಿಧಿ ವಂದಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net