ರಾಜಭವನ ದುರ್ಬಳಕೆ ತಡೆಯಲು ಸಂಪುಟ ನಿರ್ಧಾರ

h30-H.K. Patil
Published on

ಗದಗ: ರಾಜಭವನವನ್ನು ರಾಜಕೀಯ ಬಳಕೆ ಮಾಡಿಕೊಳ್ಳುವ ಪ್ರವೃತ್ತಿ ಇತ್ತೀಚೆಗೆ ಆರಂಭವಾಗಿದೆ. ಆ ಹಿನ್ನೆಲೆಯಲ್ಲಿ ಎಚ್ಚರಿಕೆ ಹೆಜ್ಜೆಯಾಗಿ ಪ್ರಕರಣಗಳ ತನಿಖೆಗೆ ಸಿಬಿಐಗೆ ನೀಡಿದ್ದ ಮುಕ್ತ ಅವಕಾಶ ಹಿಂಪಡೆಯಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಚುನಾವಣೆ ಸಂದರ್ಭದಲ್ಲಿ ಒಂದೇ ಪಕ್ಷದ ನಾಯಕ ಮೇಲೆ ಸಿಬಿಐ ದಾಳಿಯಾದವು. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಶುಕ್ರವಾರ ಮಾಧ್ಯಮಗಳಿಗೆ ಅವರು ತಿಳಿಸಿದರು.
ಮಾಜಿ ಶಾಸಕ ಕೆ.ಬಿ. ಕೋಳಿವಾಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೋಳಿವಾಡ ಅವರ ಅಭಿಪ್ರಾಯವನ್ನು ನಾವು ಒಪ್ಪುವುದಿಲ್ಲ. ರಾಜಭವನದಲ್ಲಿ ಬಿಜೆಪಿ ಮಾಡುತ್ತಿರುವುದು ರಾಜಕೀಯ ಅವರಿಗೆ ತಿಳಿದಿಲ್ಲ. ಈ ವಿಷಯದಲ್ಲಿ ಸಿದ್ದರಾಮಯ್ಯ ನಿಲುವು ಸಮರ್ಪಕವಾಗಿದೆ. ರಾಜ್ಯಪಾಲರು ಗೊಂದಲ ಸೃಷ್ಟಿಮಾಡುವ ಪ್ರಯತ್ನದಲ್ಲಿದ್ದಾರೆ ಎಂದು ಆಪಾದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net