

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಕಡೆಯಿಂದ ಪಟ್ಟಿ ಬರಬೇಕಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಾನು ದೆಹಲಿಗೆ ಹೋಗಿ ಬಂದಿದ್ದು, ಪಟ್ಟಿಗೆ ಒಪ್ಪಿಗೆ ಕೊಟ್ಟು ಕಳುಹಿಸುವುದಾಗಿ ಹೇಳಿದ್ದಾರೆ.
ಎರಡ್ಮೂರು ದಿನಗಳಲ್ಲಿ ಹೈಕಮಾಂಡ್ನಿಂದ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಒಪ್ಪಿಗೆ ಸಿಕ್ಕಕೂಡಲೇ ವಿಸ್ತರಣೆ ಮಾಡಲಾಗುತ್ತದೆ ಎಂದರು. ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಪುನಾರಚನೆ ಮಾಡಬೇಕೋ ಎಂಬುದನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಡಲಾಗಿದೆ. ಅವರು ಹೇಳಿದಂತೆ ನಡೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಪರಮಾಧಿಕಾರವಿದೆ. ಸಂಪುಟ ಹೇಗಿರಬೇಕು ಎಂಬುದನ್ನು ಅವರೇ ತೀರ್ವನಿಸುತ್ತಾರೆ. ಅವರ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೊಂಡಿದ್ದಾರೆ.