ಪಿಎಂಎನ್‌ಗೆ ಸಂಪುಟ ದರ್ಜೆ ಸ್ಥಾನಮಾನ: ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ

Mla-P.M.Narendraswamy
Published on

ಮಂಡ್ಯ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರೂ ಆದ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲಾಗಿದೆ.

ಫೆ.5ರಂದು ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿತ್ತಾದರೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿರಲಿಲ್ಲ. ಈ ಸಂಬಂಧ ರಾಜ್ಯಸರ್ಕಾರ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರ ಅನುಮತಿಗಾಗಿ ಕಳುಹಿಸಲಾಗಿತ್ತು. ಇದಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು, ಅದರಂತೆ ಸರ್ಕಾರದ ಅಧೀನ ಕಾರ್ಯದರ್ಶಿ-2 ಎನ್.ಆರ್. ಬಾಣದರಂಗಯ್ಯ ಅವರು ನರೇಂದ್ರಸ್ವಾಮಿ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲ ಸೌಲಭ್ಯ ಸಿಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net