ಸಂಪುಟ ಸಭೆ ಕಾಟಾಚಾರಕ್ಕೆ ನಡೆಯದಿರಲಿ

11 lng 02
ಶರಣಬಸವ ಈಚನಾಳ.
Published on

ಲಿಂಗಸುಗೂರು: ಕಲಬುರಗಿಯಲ್ಲಿ ಸೆ.17 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ತಾಲೂಕು ಪ್ರಧಾನ ಕಾರ್ಯದರ್ಶಿ ಶರಣಬಸವ ಈಚನಾಳ ಒತ್ತಾಯಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಕಲಬುರಗಿಯಲ್ಲಿ ಕಾಟಾಚಾರಕ್ಕೆ ಸಚಿವ ಸಂಪುಟ ಸಭೆ ನಡೆಸಬಾರದು. ಕಲಂ 371(ಜೆ) ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸಬೇಕು.

ಈ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಬೇಕು. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ರೂಪಿಸಿರುವ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಲೂಕು ಅಧ್ಯಕ್ಷ ಮಾದೇಶ ಸರ್ಜಾಪುರ, ಸಂಘಟನಾ ಕಾರ್ಯದರ್ಶಿ ಮುತ್ತಣ್ಣ ಗುಡಿಹಾಳ, ಖಜಾಂಚಿ ಮಹಾಂತೇಶ ಹೂಗಾರ, ನಗರ ಘಟಕದ ಅಧ್ಯಕ್ಷ ರಾಜೀವ ರಡ್ಡಿ, ಉಪಾಧ್ಯಕ್ಷ ಜಗನ್ನಾಥ ಜಾಧವ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net