

ಮೈಸೂರು: ಅಗ್ರಹಾರದ ಉತ್ತರಾದಿಮಠದ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಕೇಬಲ್ ಆಪರೇಟರ್ ಮೃತಪಟ್ಟಿದ್ದಾರೆ.
ನಂಜನಗೂಡು ತಾಲೂಕಿನ ಆಲತ್ತೂರು ಗ್ರಾಮದ ಕೇಬಲ್ ಆಪರೇಟರ್ ಕೇಬಲ್ ಸತೀಶ್ (46) ಮೃತರು. ಬೈಕ್‌ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೆ.ಆರ್.ಆಸ್ಪತ್ರೆಗೆ ಕರೆದೊಯ್ಯವ ವೇಳೆ ಸಾವಿಗೀಡಾಗಿದ್ದಾರೆ. ನಗರದ ಕೆ.ಆರ್. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.