ಶಿಸ್ತುಬದ್ಧ ಕಾರ್ಯಚಟುವಟಿಕೆಗೆ ಕ್ಯಾಲೆಂಡರ್ ಸಹಕಾರಿ

04 HANUR 1
ಹನೂರಿನಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕ್ಯಾಲೆಂಡರ್‌ಅನ್ನು ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ಬಿಡುಗಡೆಗೊಳಿಸಿದರು. ಡಾ.ಪ್ರಕಾಶ್, ಸೋಮಶೇಖರ್, ಹರೀಶ್, ಸುದೇಶ್, ಬಸವರಾಜು, ವಿನೋದ್‌ಕುಮಾರ್ ಇತರರು ಇದ್ದರು.
Published on

ಹನೂರು: ಪ್ರತಿಯೊಬ್ಬರೂ ಶಿಸ್ತುಬದ್ಧವಾದ ಕಾರ್ಯಚಟುವಟಿಕೆ ಕೈಗೊಳ್ಳಲು ಕ್ಯಾಲೆಂಡರ್ ಹಾಗೂ ದಿನಚರಿ ಪುಸ್ತುಕ ಉತ್ತಮ ಮಾರ್ಗದರ್ಶಿ ಎಂದು ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿಗೃಹದ ಸಭಾಂಗಣದಲ್ಲಿ ಶನಿವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ದಿನದರ್ಶಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕಾ ರಂಗ. ಪತ್ರಕರ್ತರು ಸಮಾಜದಲ್ಲಿನ ಅಂಕು-ಡೊಂಕುಗಳನ್ನು ತಿದ್ದುವ ಮೂಲಕ ಉತ್ತಮ ಸಮಾಜ ನಿರ್ಮಿಸುವ ಶ್ರಮಿಕರು. ಹಾಗಾಗಿ ಸಮಾಜದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ಅಪಾರ. ಈ ದಿಸೆಯಲ್ಲಿ ತಾಲೂಕಿನ ಪತ್ರಕರ್ತರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದರ ಮೂಲಕ ತಾಲೂಕಿನ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದು ಮೆಚ್ಚುವ ಸಂಗತಿ. ದಿನದರ್ಶಿಕೆಯನ್ನು ಬಿಡುಗಡೆಗೊಳಿಸುರುವುದು ಸಂತಸದ ವಿಚಾರ. ಸಂಘವು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಹೆಸರು ಗಳಿಸುವಂತಾಗಬೇಕು. ನಿವೇಶನ ಮಂಜೂರು ಸಂಬಂಧ ನೀಡಿರುವ ಮನವಿ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮವಹಿಸುವುದಾಗಿ ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಮಾತನಾಡಿ, ಪತ್ರಕರ್ತರು ಹಾಗೂ ಇವರ ಕುಟುಂಬಗಳಿಗೆ ಮುಂದಿನ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗುವುದು ಎಂದು ತಿಳಿಸಿದರು.

ಪಪಂ ಸದಸ್ಯರಾದ ಸೋಮಶೇಖರ್, ಹರೀಶ್, ಸುದೇಶ್, ಬಸವರಾಜು, ತಾಲೂಕು ಸಾರ್ವಜನಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಟಿ. ಸೊಮಶೇಖರ್, ಪ್ರಧಾನ ಕಾರ್ಯದರ್ಶಿ ವಿನೋದ್‌ಕುಮಾರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾದೇಶ್, ಗೌರವಾಧ್ಯಕ್ಷ ದೇವರಾಜು ನಾಯ್ಡು, ಕಾರ್ಯದರ್ಶಿ ಬಸವರಾಜು, ಸಹ ಕಾರ್ಯದರ್ಶಿ ಗೋವಿಂದ, ಖಜಾಂಚಿ ಮಹದೇವಸ್ವಾಮಿ, ಜಿಲ್ಲಾ ನಿರ್ದೇಶಕರಾದ ಸುರೇಶ್, ಪ್ರಭುಸ್ವಾಮಿ, ನಿರ್ದೇಶಕರಾದ ಎಸ್.ಲಿಂಗರಾಜು ಮಂಗಲ, ಸೋಮಶೇಖರ್, ಮಧು ಹಾಗೂ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net