

ಬೆಳಗಾವಿ: ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪಶು ಸಂಜೀವಿನಿ ಯೋಜನೆಯಡಿ ಸಂಚಾರಿ ವಾಹನ ಘಟಕದ ಮೂಲಕ ರೈತರ ಮನೆ ಬಾಗಿಲಿಗೆ ತುರ್ತು ಪಶು ಚಿಕಿತ್ಸಾ ಸೇವೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 17 ವಾಹನಗಳುಕಾರ್ಯನಿರ್ವಹಿಸುತ್ತಿವೆ.ಜಾನುವಾರುಗಳಿಗೆ ತುರ್ತು ಚಿಕಿತ್ಸೆ ಪಡೆಯಲು ‘1962’ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡುವ ಮೂಲಕ ಸೇವೆ ಪಡೆಯಬೇಕು. ಜೂನ್ ತಿಂಗಳಲ್ಲಿ ಒಟ್ಟು ‘1092’ ತುರ್ತು ಕರೆ ಸ್ವೀಕರಿಸಿ, ಒಟ್ಟು 2,196 ಜಾನುವಾರುಗಳಿಗೆ ರೈತರ ಮನೆ ಬಾಗಿಲಿನಲ್ಲಿ ತುರ್ತು ಚಿಕಿತ್ಸೆ ನೀಡಲಾಗಿದೆ. ಪ್ರವಾಹ/ಅತಿವೃಷ್ಟಿ ಸಂಭವನೀಯವಿದ್ದು, ಅಂತಹ ಸಂದರ್ಭಗಳಲ್ಲಿಯೂ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ಅವಶ್ಯವಿದ್ದಲ್ಲಿ 1962 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡುವ ಮೂಲಕ ಜಿಲ್ಲೆಯ ಎಲ್ಲ ರೈತರು ಸೇವೆ ಪಡೆಯಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ.ರಾಜೀವ ಕೂಲೇರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.