

ವಿಜಯವಾಣಿ ಸುದ್ದಿಜಾಲ ಧಾರವಾಡ
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಶ್ರೇಯಸ್ಸಿಗಾಗಿ ಸೇವೆ ಸಲ್ಲಿಸಿದವರನ್ನು ಗುರುತಿಸಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ 2025- 26ನೇ ಸಾಲಿನ ಡಾ. ಬಾಬುಜಗಜೀವನ್ ರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ದಾಖಲೆಗಳೊಂದಿಗೆ ಫೆ. 28ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.