

ವಿಜಯಪುರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಚಿಗುರು, ಯುವ ಸೌರಭ ಹಾಗೂ ಸಾಂಸತಿಕ ಸೌರಭ ಕಾರ್ಯಕ್ರಮ ಆಯೋಜನೆ ಉದ್ದೇಶದಿಂದ ಇಲಾಖೆಯ ಸಾಂಸತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
ಚಿಗುರು ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು 8 ರಿಂದ 14 ವರ್ಷದ ಪ್ರತಿಭಾವಂತ ಬಾಲ ಪ್ರತಿಭೆಗಳಾಗಿರಬೇಕು. ಯುವ ಸೌರಭ ಕಾರ್ಯಕ್ರಮಕ್ಕೆ ಭಾಗವಹಿಸುವವರು 15 ರಿಂದ 30 ವರ್ಷದ ಪ್ರತಿಭಾವಂತ ಯುವ ಕಲಾವಿದರಾಗಿರಬೇಕು. ಆಕಾಶವಾಣಿ ವಿವಿಧ ಗ್ರೇಡ್ಗಳ ಕಲಾವಿದರನ್ನು ಹಾಗೂ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿ ಪುರಸತ ಕಲಾವಿದರನ್ನು ಸಾಂಸತಿಕ ಸೌರಭ ಕಾರ್ಯಕ್ರಮಕ್ಕೆ ಪರಿಗಣಿಸಲಾಗುತ್ತದೆ.
ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಗತ್ಯ ದಾಖಲೆ ಸಹಿತ ಅರ್ಜಿಯನ್ನು ಜು. 8 ರೊಳಗಾಗಿ ಇಲ್ಲಿನ ಸ್ಟೇಷನ್ ರಸ್ತೆಯ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸತಿ ಇಲಾಖೆ, ಕಂದಗಲ್ಲ ಹನುಮಂತರಾಯ ರಂಗಮಂದಿರಕ್ಕೆ ಖುದ್ದಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸತಿ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.