ಕಲಾವಿದರಿಂದ ಅರ್ಜಿ ಅಹ್ವಾನ

logo
Published on

ಮಡಿಕೇರಿ: ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯಿಂದ ಸೆ.೨೩ ರಿಂದ ಅ.೨ರ ವರೆಗೆ ನಗರದಲ್ಲಿ ಆಯೋಜಿತ ಮಡಿಕೇರಿ ದಸರಾ ಜನೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಕುಡೆಕಲ್ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೆ.೨೩ ರಿಂದ ಅ೨ ರವರೆಗೆ ದಸರಾ ಸಾಂಸ್ಕೃತಿಕ ಸಮಿತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಕಲಾವಿದರು, ಕಲಾತಂಡಗಳು ಪ್ರದರ್ಶಿಸುವ ಕಲಾ ಪ್ರಕಾರ, ಪಾಲ್ಗೊಳ್ಳುವ ಕಲಾವಿದರ ಸಂಖ್ಯೆ, ಅಪೇಕ್ಷಿತ ದಿನಾಂಕ, ಮೊಬೈಲ್ ಸಂಖ್ಯೆಯೊಂದಿಗಿನ ವಿಳಾಸವನ್ನು ಆ.೨೫ ರೊಳಗಾಗಿ ಅಧ್ಯಕ್ಷರು, ಮಡಿಕೇರಿ ನಗರ ದಸರಾ ಸಾಂಸ್ಕೃತಿಕ ಸಮಿತಿ, ಮಡಿಕೇರಿ ನಗರ ದಸರಾ ಸಮಿತಿ ಕಛೇರಿ, ನಗರಸಭಾ ಸಂಕೀರ್ಣ, ಮುಖ್ಯರಸ್ತೆ, ಮಡಿಕೇರಿ ೫೭೧೨೦೧ ಈ ವಿಳಾಸಕ್ಕೆ ತಲುಪಿಸಬೇಕು. ಅಥವಾ mಚಿಜiಞeಡಿiಜಚಿsಚಿಡಿಚಿ@gmಚಿiಟ.ಛಿom ಇಮೇಲ್ ಮೂಲಕ ಕಳುಹಿಸಬಹುದು.

ಒಂದು ಕಲಾತಂಡಕ್ಕೆ, ಕಲಾವಿದರಿಗೆ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ೧೧ ದಿನಗಳ ಪೈಕಿ ಒಂದು ಬಾರಿ ಮಾತ್ರ ಪ್ರದರ್ಶನ ನೀಡಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಮೊ.೯೯೭೨೫೩೮೫೮೪, ೮೭೬೨೧೧೦೯೪೮ ಸಂಪರ್ಕಿಸಬಹುದೆಂದು ಎಂದು ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net