

ಮೈಸೂರು: ಉದಯೋನ್ಮುಖ ಹಾಗೂ ಸಾಧಕ ಅಥ್ಲೀಟ್‌ಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲು ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಅರ್ಜಿ ಆಹ್ವಾನಿಸಿದೆ.
2022-23ನೇ ಸಾಲಿನ ಶಾಲಾ- ಕಾಲೇಜು ಹಾಗೂ ವಿಶ್ವವಿದ್ಯಾಲಯ ಹಂತದ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಕರ್ನಾಟಕ ರಾಜ್ಯ ಪ್ರತಿನಿಧಿಸಿರುವ ಜಿಲ್ಲಾ ಅಥ್ಲೀಟ್‌ಗಳಿಗೆ ನಗದು ಪುರಸ್ಕಾರ, ಪ್ರಶಸ್ತಿ ಪತ್ರ, ಪಾರಿತೋಷಕವನ್ನು ನೀಡಿ ಸನ್ಮಾನಿಸಲು ತೀರ್ಮಾನಿಸಿದೆ. ಜತೆಗೆ ಅತ್ಯುತ್ತಮ ಸಾಧನೆಗೈದ ಅಥ್ಲೀಟ್‌ಗೆ ವರ್ಷದ ‘ಅತ್ಯುತ್ತಮ ಅಥ್ಲೀಟ್’ ಪ್ರಶಸ್ತಿ ನೀಡಲು ಸಂಸ್ಥೆ ನಿರ್ಧರಿಸಿದೆ.
ಏಪ್ರಿಲ್ 2022 ರಿಂದ ಮಾರ್ಚ್ 2023 ರವರೆಗೆ ನಡೆದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಜಿಲ್ಲೆಯ ಶಾಲಾ, ಪದವಿ ಪೂರ್ವ ಹಾಗೂ ವಿಶ್ವವಿದ್ಯಾಲಯ ಮಟ್ಟದ ಅಥ್ಲೀಟ್‌ಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕ್ಲಬ್ ಕಾರ್ಯದರ್ಶಿ ಎಂ.ಯೋಗೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂ.9448046667 ಅನ್ನು ಸಂಪರ್ಕಿಸಲು ಕೋರಲಾಗಿದೆ.