ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಕೃತಿ ಆಹ್ವಾನ

ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಕೃತಿ ಆಹ್ವಾನ
Published on

ನಾಪೋಕ್ಲು: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಪುರುಷ ಲೇಖಕರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಲೇಖಕರು ರಚಿಸಿದ ಕಥೆ, ಕಾದಂಬರಿ, ಕವನ ಸಂಕಲನ ಕೃತಿಗಳ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಬೇಕು. 2019ರ ನಂತರ ಪ್ರಕಟವಾದ ಪುಸ್ತಕಗಳನ್ನು ಮಾತ್ರ ಕಳುಹಿಸಬೇಕು. ಕಳುಹಿಸುವ ಕೃತಿಗೆ ಯಾವುದೇ ಪ್ರಶಸ್ತಿ ಬಂದಿರಬಾರದು. ಒಬ್ಬ ಲೇಖಕ ಒಂದು ಕೃತಿಯನ್ನು ಮಾತ್ರ ಕಳುಹಿಸಬೇಕು. ಲಕೊಟೆಯ ಮೇಲೆ ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಎಂದು ಬರೆದಿರಬೇಕು.

ವಿಳಾಸ: ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ _9448346276 ಇಲ್ಲಿಗೆ ದಿನಾಂಕ 25.12.2024ರ ಒಳಗೆ ಕಳುಹಿಸಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net