ಸಾರಿಗೆ ನೌಕರರೇ ಹಠ ಬಿಟ್ಟು ಬನ್ನಿ: ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಕಿವಿಮಾತು

DCM
Published on

ಮಂಗಳೂರು: ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧ, 8 ಪ್ರಮುಖ ಬೇಡಿಕೆಗಳನ್ನು ಈಡೇರಿಸಲಾಗಿದೆ. ಆರನೇ ವೇತನ ಆಯೋಗ ಶಿಫಾರಸು ಜಾರಿ ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸಾರಿಗೆ ನೌಕರರು ಹಠ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ ಕಿವಿಮಾತು ಹೇಳಿದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ನ್ಯಾಯಯುತ, ನಿಗದಿತ ವೇತನವನ್ನು ನೀಡಲು ಸರ್ಕಾರ ಸಿದ್ಧವಿದೆ. ಕೋವಿಡ್ ಅವಧಿಯಲ್ಲಿ ಸರ್ಕಾರ ಕೆಎಸ್ಸಾರ್ಟಿಸಿಗೆ 1,200 ಕೋಟಿ ರೂ. ನೆರವು ನೀಡಿದೆ. ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಎಲ್ಲರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿದೆ. ಸಾರಿಗೆ ನೌಕರರಿಗೆ ನ್ಯಾಯ ಒದಗಿಸುತ್ತೇವೆ ಎಂದರು.

ರಾಜ್ಯದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಜಿಲ್ಲಾ ಕೇಂದ್ರಗಳಲ್ಲಿ ಶನಿವಾರದಿಂದ ಕರೊನಾ ಕರ್ಫ್ಯೂ ವಿಧಿಸಲಾಗುತ್ತಿದೆ. ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಜನರ ಓಡಾಟ ನಿಯಂತ್ರಿಸಿ ಕರೊನಾ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಸರ್ಕಾರದ ಉದ್ದೇಶ. ಇದಕ್ಕೆ ಜನರು ಸಹಕಾರ ನೀಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net