ಆನ್‌ಲೈನ್ ಗೇಮ್ ನಿಷೇಧಕ್ಕೆ ಒತ್ತಾಯ

Published on

ಮೈಸೂರು: ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮ್‌ಗಳಿಂದ ಆಗುತ್ತಿರುವ ಅನಾಹುತಗಳನ್ನು ತಡೆಯಬೇಕು ಹಾಗೂ ಅವುಗಳನ್ನು ನಿಷೇಧಿಸಬೇಕು ಎಂದು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾಲಕ್ಕೆ ಸಿಲುಕಿರುವವರು ಬಹುತೇಕ ಯುವಕರೇ ಆಗಿದ್ದಾರೆ. ಪದವಿ ಪಡೆದು ಉದ್ಯೋಗ ಗಳಿಸಿ ಕುಟುಂಬದ ಜವಾಬ್ದಾರಿ ನೋಡಿಕೊಳ್ಳಬೇಕಾದ ಸಮಯದಲ್ಲಿ ಬೆಟ್ಟಿಂಗ್ ಜಾಲದಲ್ಲಿ ಸಿಲುಕಿ ನರಳುತ್ತಿದ್ದಾರೆ. ಸಾವಿರಾರು ಜನರು ಆತ್ಮಹತ್ಯೆಗೆ ಶರಣಾಗಿದ್ದು ಲಕ್ಷಾಂತರ ಕುಟುಂಬಗಳು ಬೀದಿಪಾಲಾಗಿವೆ. ಉನ್ನತ ಸ್ಥಾನದಲ್ಲಿರುವವರು ಮೌನಕ್ಕೆ ಶರಣಾಗಿರುವುದು ಸರಿಯಲ್ಲ. ಈ ಬಗ್ಗೆ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಕೆಲವು ಪೊಲೀಸ್ ಠಾಣೆಗಳಲ್ಲಿ ಅನಧಿಕೃತವಾಗಿ ಬೆಟ್ಟಿಂಗ್ ವ್ಯವಸ್ಥೆ ನಡೆಸುತ್ತಿದ್ದ ಆನ್‌ಲೈನ್ ಬುಕ್ಕಿಗಳ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಜನರಿಗೆ ಅರಿವು ಮೂಡಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net