ಕೇಂದ್ರ ಸಚಿವರ ರಾಜೀನಾಮೆಗೆ ಒತ್ತಾಯ

Published on

ಬಳ್ಳಾರಿ : ಲೋಕಸಭೆಯ ಆಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ಖಂಡಿಸಿ, ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯ ಒಕ್ಕೂಟ ಶನಿವಾರ ಪ್ರತಿಭಟನೆ ನಡೆಸಿದರು.

ದೇಶದ ಜನರ ಬದುಕನ್ನೇ ಬದಲಿಸುವಂತಹ ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅಲ್ಲದೆ, ಜಗತ್ತಿನಾದ್ಯಂತ ಪಕ್ಷಾತೀತವಾಗಿ, ಧರ್ಮಾತೀತವಾಗಿ ಇರುವ ಕೋಟ್ಯಾಂತರ ಜನ ಬಾಬಾಸಾಹೇಬರ ಅಭಿಮಾನಿಗಳ ಅಭಿಮಾನವನ್ನು ಅವಮಾನಿಸಿದ್ದಾರೆ. ಸಂವಿಧಾನ ಬದಲಿಸುವುದಾಗಿ, ಮೀಸಲಾತಿ ತೆಗೆದು ಹಾಕುವುದಾಗಿ, ಮಹಿಳಾ ವಿರೋಧಿ, ಅಲ್ಪಸಂಖ್ಯಾತರ ವಿರೋಧಿ, ದಲಿತ ವಿರೋಧಿ ಹೇಳಿಕೆಗಳು ಸೇರಿದಂತೆ ಹಲವು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತ ಅಮಿತ್ ಷಾ ಬಂದಿದ್ದಾರೆ. ಇಂತಹ ಹೇಳಿಕೆಗಳಿಗೆ ಕೂಡಲೇ ಕಡಿವಾಣ ಹಾಕಬೇಕು ಹಾಗೂ ಕೇಂದ್ರ ಗೃಹ ಸಚಿವರ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಒಕ್ಕೂಟ ಆಗ್ರಹಿಸಿತು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net