ಸರಳ ದಸರಾ ಆಚರಣೆಗೆ ಜಿಲ್ಲಾಧಿಕಾರಿ ಆದೇಶ

dasara
Published on

ಮಂಗಳೂರು: ಕರೊನಾ ಸೋಂಕು ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ನಾಡಹಬ್ಬ ದಸರಾವನ್ನು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸರಳ ರೀತಿಯಲ್ಲಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ೧೦೦ಕ್ಕಿಂತ ಹೆಚ್ಚು ಜನರು ಒಂದೆಡೆ ಸೇರದಂತೆ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿಕಾರಿಗಳು ಮುಂಚಿತವಾಗಿ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿಯನ್ನು ಪಡೆಯಬೇಕು ಹಾಗೂ ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್ ಮಾಸ್ಕ್ ಬಳಕೆ, ಅಂತರ ಪಾಲನೆಗೆ ಕ್ರಮಕೈಗೊಳ್ಳಬೇಕು. ಕೋವಿಡ್-೧೯ ಮಾರ್ಗಸೂಚಿಗಳು ಉಲ್ಲಂಘನೆಯಾದಲ್ಲಿ ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ.

ದಸರಾ ಹಬ್ಬದ ಸಂದರ್ಭದಲ್ಲಿ ದೇವಸ್ಥಾನದ ಆವರಣದೊಳಗೆ ಮಾತ್ರ ಗರಿಷ್ಠ ೧೦ ಹುಲಿ ವೇಷಧಾರಿಗಳಿಗೆ ನಿಗದಿತ ಕಾಲಮಿತಿಯೊಳಗೆ ಹರಕೆ ಅರ್ಪಿಸಲು ಅನುಮತಿ ನೀಡಲಾಗಿದೆ. ಹುಲಿ ವೇಷಧಾರಿಗಳು ದೇವಸ್ಥಾನದ ಹೊರಗೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶನ ನೀಡುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net