ಈ ನಂಬರ್​ಗೆ ಕರೆ ಮಾಡಿದ್ರೆ ಮನೆ ಬಾಗಿಲಲ್ಲೇ ಕೋವಿಡ್ ಟೆಸ್ಟ್ ಮಾಡ್ತಾರೆ

mobile covid test
Published on

ಬೆಂಗಳೂರು: ಸಿಲಿಕಾನ್​ ಸಿಟಿ ಸದ್ಯ ಕಂಪ್ಲೀಟ್​ ಲಾಕ್​ಡೌನ್ ಆಗಿದ್ದು, ಈ ಸಂದರ್ಭದಲ್ಲಿ ಕೋವಿಡ್ ಟೆಸ್ಟ್ ಅನಿವಾರ್ಯತೆ ಉಳ್ಳವರು ತಮ್ಮ ಮನೆ ಬಾಗಿಲಿನಲ್ಲೇ ಪರೀಕ್ಷೆಗೆ ಒಳಪಡಬಹುದು.

ಬಿಬಿಎಂಪಿ ವ್ಯಾಪ್ತಿಯ ಹಿರಿಯ ನಾಗರಿಕರು, ಕೋ-ಮೋರ್ಬಿಡ್ ಅಸ್ವಸ್ಥರು, ರೋಗಲಕ್ಷಣ ಉಳ್ಳವರ ಪ್ರಾಥಮಿಕ ಸಂಪರ್ಕಕ್ಕೆ ಒಳಪಟ್ಟವರು ತಮ್ಮ ವಲಯದಲ್ಲಿ ಕಾರ್ಯನಿರ್ವಹಿಸುವ ಮೊಬೈಲ್ ಟೆಸ್ಟಿಂಗ್ ವಾಹನಕ್ಕೆ ಕರೆ ಮಾಡುವ ಮೂಲಕ ಮನೆ ಬಾಗಿಲಲ್ಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬಹುದು.

ಬೆಂಗಳೂರಿನಲ್ಲಿ ಮನೆ ಬಾಗಿಲಲ್ಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಲಯವಾರು ಸಹಾಯವಾಣಿ ಇಂತಿದೆ.

ಯಲಹಂಕ- 080-28560696/ 87920 32820/5180

ಮಹದೇವಪುರ- 080-23010101/102

ಬೊಮ್ಮನಹಳ್ಳಿ- 85488 83334/ 89700 0222‌8

ಆರ್.ಆರ್. ನಗರ- 080-2600208

ದಕ್ಷಿಣ ವಲಯ- 70227 24772

ಪೂರ್ವ ವಲಯ -99000 94042

ಪಶ್ಚಿಮ ವಲಯ 080-68248454/ 72041 79723

ಕೋವಿಡ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಗಂಟಲು ದ್ರವ(ಸ್ವ್ಯಾಬ್) ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ಯಾವುದೇ ವ್ಯಕ್ತಿ ಫಲಿತಾಂಶ ಲಭ್ಯ ಆಗುವವರೆಗೂ ಮನೆಯಲ್ಲೇ ಪ್ರತ್ಯೇಕತೆ (ಐಸೋಲೇಷನ್) ಕಾಯ್ದುಕೊಳ್ಳಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಸಾಂಕ್ರಾಮಿಕ ರೋಗ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುತ್ತದೆ. ಆಪ್ತಮಿತ್ರ-ಕೋವಿಡ್19 ಸಹಾಯವಾಣಿ, ಟೆಲಿಮೆಡಿಸಿನ್ ಮತ್ತು ಆಸ್ಪತ್ರೆಗೆ ಉಲ್ಲೇಖಿಸಲು-14410, ಆಂಬುಲೆನ್ಸ್ ಸೇವೆಗೆ -108, ಆಸ್ಪತ್ರೆ ನಿರಾಕರಣೆ ಸಂಬಂಧದ ಕುಂದು ಕೊರತೆಗಾಗಿ-1912, ಸಾಮಾನ್ಯ ಆರೋಗ್ಯ ಸಮಸ್ಯೆ ಕುರಿತ ಮಾಹಿತಿಗಾಗಿ -104 ಸಂಖ್ಯೆಗಳಿಗೆ ಸಾರ್ವಜನಿಕರು ಕರೆ ಮಾಡಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net