ಶೈಕ್ಷಣಿಕ ಪ್ರಗತಿಗೆ ಶಿಬಿರ ಸಹಕಾರಿ

SHIBIRA
ಶಿರಸಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಎಂ.ಎಸ್.ಪ್ರಸನ್ನ ಕುಮಾರ್ ಪ್ರೇರಣಾ ಶಿಬಿರ ಉದ್ಘಾಟಿಸಿದರು.
Published on

ಕಾರ್ಕಳ: ಪ್ರೇರಣಾ ಶಿಬಿರ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಶೈಕ್ಷಣಿಕ ಪ್ರಗತಿಗೆ ಶಿಬಿರ ಅನುಕೂಲಕರವಾಗಿದ್ದು, ಇದರ ಹೆಚ್ಚಿನ ಪ್ರಯೋಜನ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿದೆ ಎಂದು ಶಿರಸಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿವೃತ್ತ ನಿರ್ದೇಶಕ ಎಂ.ಎಸ್.ಪ್ರಸನ್ನ ಕುಮಾರ್ ಹೇಳಿದರು.

ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಸಂಯುಕ್ತ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಶಿರಸಿ ಲಯನ್ಸ್ ಪ್ರೌಢಶಾಲಾ ಸಭಾಂಗಣದಲ್ಲಿ ವಸತಿಯುತ ಪ್ರೇರಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಕ್ರಿಯೆಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಗಣಪತಿ ಭಟ್ ಕೆ.ಎಸ್.ಮಾತನಾಡಿ, ಎಸ್ಸೆಸ್ಸೆಲ್ಸಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆಯುವ ಸಲುವಾಗಿ ವಿಶೇಷ ತರಬೇತಿ ನೀಡುವ ಪ್ರೇರಣಾ ಶಿಬಿರದ ಪ್ರಯೋಜನ ಹೆಚ್ಚಾಗಿ ಪಡೆದು ಕೊಳ್ಳುವಂತಾಗಬೇಕು. ಈ ಮೂಲಕ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಲು ಕಾರಣವಾಗುತ್ತದೆ ಎಂದರು.

ಡಯಟ್ ಶಿರಸಿಯ ಪ್ರಾಚಾರ್ಯ ಎಂ.ಎಸ್.ಹೆಗಡೆ, ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಲಯನ್ಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಲೋಕೇಶ್ ಹೆಗಡೆ, ರಾಮಕೃಷ್ಣ ಸ್ಟೂಡೆಂಟ್ ಹೋಮ್‌ನ ವ್ಯವಸ್ಥಾಪಕ ಮುರಾರಿ ಭಟ್, ಲಯನ್ಸ್ ಪ್ರೌಢಶಾಲಾ ಮುಖ್ಯಶಿಕ್ಷಕ ಶಶಾಂಕ್ ಹೆಗಡೆ ಉಪಸ್ಥಿತರಿದ್ದರು.

ಶಿಬಿರದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲಾ 6 ತಾಲೂಕಿನ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ, ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಕಾರ್ಕಳದ ಪಿಆರ್‌ಒ ಲಿಶಾನ್ ಗೌಡ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net