ಪ್ರತಿಭೆಗಳ ಅನಾವರಣಕ್ಕೆ ಶಿಬಿರ ಸಹಕಾರಿ

bala leele
ಕಾರ್ಕಳ ಯಕ್ಷ ರಂಗಾಯಣ ಸಭಾಂಗಣದಲ್ಲಿ ಬಾಲಲೀಲೆ ಮಕ್ಕಳ ರಂಗ ಶಿಬಿರ ನಡೆಯಿತು.
Published on

ಕಾರ್ಕಳ: ಶಿಬಿರಗಳು ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಸಹಕಾರಿಯಾಗಿದ್ದು, ಮಕ್ಕಳು ರಜಾ ದಿನಗಳಲ್ಲಿ ಮೊಬೈಲ್ ಹಾಗೂ ಟಿ.ವಿಯ ಬಳಕೆಯಲ್ಲಿ ಕಾಲಹರಣ ಮಾಡದೆ ಬೇಸಿಗೆ ಶಿಬಿರಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಾರ್ಕಳ ಯಕ್ಷ ರಂಗಾಯಣ ಸಹಯೋಗದಲ್ಲಿ ಯಕ್ಷ ರಂಗಾಯಣದ ಸಭಾಂಗಣದಲ್ಲಿ ಬುಧವಾರ ‘ಬಾಲಲೀಲೆ’ ಮಕ್ಕಳ ರಂಗ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಕಾರ್ಕಳ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ ಅಧ್ಯಕ್ಷತೆ ವಹಿಸಿ ಮಾತನಾಡಿ, ಶೈಕ್ಷಣಿಕೆ ಚಟುವಟಿಕೆಯ ಹೊರತಾಗಿ ಚಿತ್ರಕಲೆ, ಸಾಹಿತ್ಯ, ಸಂಗೀತ ಹಾಗೂ ಇನ್ನಿತರ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಮಕ್ಕಳಿಗೆ ಪಾಲಕರು ಪ್ರೋತ್ಸಾಹ ನೀಡಬೇಕು ಎಂದರು.

ಆರ್ಕಿಟೆಕ್ಟ್ ಪ್ರಮಲ್ ಕುಮಾರ್ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ವಸಂತ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net