ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ಕ್ರಮಗಳ ಕುರಿತು ಶಿಬಿರ ಇಂದು

2_10_04_16_Self-defence-training-for-girls-in-Govt-schools-HRD-Minister_1_H@@IGHT_578_W@@IDTH_900
Published on

ಹೊಸಪೇಟೆ: ಬಳ್ಳಾರಿ ಜಿಲ್ಲಾ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ಆ.೨೫ರ ಶುಕ್ರವಾರ ಬೆಳಿಗ್ಗೆ ೧೦ ಗಂಟೆಗೆ ಹೆಣ್ಣು ಮಕ್ಕಳಿಗೆ ಆತ್ಮ ರಕ್ಷಣೆ ಕ್ರಮಗಳ ಕುರಿತು ಶಿಬಿರವನ್ನು ಆಯೋಜಿಸಿದೆ.


ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪುಷ್ಪಂಜಲಿ ದೇವಿ ಶಿಬಿರವನ್ನು ಉದ್ಘಾಟಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮಾನ್ ಎ. ನಂದಗಡಿ, ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹೇಮಲತಾ ಬಿ. ಹುಲ್ಲೂರ, ಸಿವಿಲ್ ನ್ಯಾಯಾಧೀಶ ರಾಜೇಶ್ ಹೊಸಮನಿ, ಅಪರ ಸಿವಿಲ್ ನ್ಯಾಯಾಧೀಶ ರಮೇಶ ಬಾಬು ಬಿ.ಎನ್., ಪ್ರಧಾನ ಸಿವಿಲ್ ನ್ಯಾಯಾಧೀಶ ಕಿಶನ್ ಬಿ. ಮಾಡಲಗಿ, ಅಪರ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ತೃಪ್ತಿ ಧರಣಿ ಸೇರಿದಂತೆ ಇತರರು ಪಾಲ್ಗೊಳ್ಳುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net