ಶಿಗ್ಗಾಂವಿ ಕ್ಷೇತ್ರದಲ್ಲಿ ಶಾಸಕ ಟೆಂಗಿನಕಾಯಿ ಪ್ರಚಾರ

New Tenginakayi
Published on

ಹುಬ್ಬಳ್ಳಿ : ಶಿಗ್ಗಾಂವಿಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರಾರ್ಥವಾಗಿ ಬಂಕಾಪುರ ಗ್ರಾಮದಲ್ಲಿ ಪುರಸಭೆ ಸದಸ್ಯರು ಹಾಗೂ ಪ್ರಮುಖರೊಂದಿಗೆ ಶಾಸಕ ಮಹೇಶ ಟೆಂಗಿನಕಾಯಿ ಬುಧವಾರದಂದು ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟೆಂಗಿನಕಾಯಿ, ಈ ಹಿಂದೆ ಶಾಸಕರಾಗಿ, ಜಲ ಸಂಪನ್ಮೂಲ ಸಚಿವರಾಗಿ ಮತ್ತು ರಾಜ್ಯದ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದಲ್ಲಿ ಸಾಕಷ್ಟು ಕೆಲಸವನ್ನು ಮಾಡಿದ್ದಾರೆ. ಶಿಗ್ಗಾಂವಿ-ಸವಣೂರು ಕ್ಷೇತ್ರದಲ್ಲಿ ನೀರಾವರಿ ಕ್ರಾಂತಿ ಮಾಡಿದ್ದಾರೆ ಎಂದರು.

ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಹಾಗೂ ಕೇಂದ್ರದ ಎನ್ ಡಿ ಎ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಿಳಿಸಬೇಕು ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಹಗರಣ ಹಾಗೂ ವೈಫಲ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಬಿಜೆಪಿ ಅಭ್ಯರ್ಥಿಯಾದ ಉತ್ಸಾಹಿ ಯುವಕ ಭರತ್ ಬೊಮ್ಮಾಯಿ ಅವರನ್ನು ಬಹುಮತದೊಂದಿಗೆ ಗೆಲ್ಲಿಸಲು ಶ್ರಮಿಸಬೇಕು ಎಂದು ತಿಳಿಸಿದರು.

ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಹು-ಧಾ ಮಹಾನಗರ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ಭೀರಪ್ಪ ಖಂಡೇಕರ, ಪ್ರಮುಖರಾದ ರಾಜೇಶ ನೇರ್ಲಿ, ಸಿದ್ದು ಮೊಗಲಿಶೆಟ್ಟರ, ದಾದಾಗೌಡ ಬಿರಾದಾರ, ಮುರುಗೇಂದ್ರ ಪಾಟೀಲ, ಬಸವರಾಜ ನಾರಾಯಣಪುರ, ರಾಜು ಟೋಪಣ್ಣವರ, ರಾಜು ಬದ್ದಿ, ಯಲ್ಲಪ್ಪ ಸುಂಕದ, ಮಂಜುನಾಥ ತಳವಾರ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net