

ಕಾಗವಾಡ: ಮಕ್ಕಳು, ಮಹಿಳೆಯರನ್ನು ಆರೋಗ್ಯವಂತರನ್ನಾಗಿಸುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿರುವ ಪೋಷಣ ಮಾಸಾಚರಣೆ ಲಾಭ ಪಡೆದುಕೊಳ್ಳುವಂತೆ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶ ಚನ್ನಬಸಪ್ಪ ಕೋಡಿ ಹೇಳಿದರು.
ತಾಲೂಕಿನ ಶೇಡಬಾಳ ಪಟ್ಟಣದ ಸನ್ಮತಿ ವಿದ್ಯಾಲಯದಲ್ಲಿ ಪೋಷಣ ಅಭಿಯಾನ ಮಾಸಾಚರಣೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿ, ಅಪೌಷ್ಟಿಕತೆ ಹೋಗಲಾಡಿಸಲು ಗರ್ಭಿಣಿ, ಬಾಣಂತಿ, ಮಹಿಳೆಯರು ಮತ್ತು ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ತಹಸೀಲ್ದಾರ್ ರಾಜೇಶ ಬುರ್ಲಿ ಮಾತನಾಡಿ, ಅಭಿಯಾನ ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದರು. ಡಾ.ಸುಜಾತಾ ಮುರಗೋಡ ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷ ಪಿ.ಎ.ಮಾನೆ, ಸಿಡಿಪಿಒ ಸಂಜೀವಕುಮಾರ ಸದಲಗಿ, ವೈದ್ಯಾಧಿಕಾರಿ ಪುಷ್ಪಲತಾ ಸುಣ್ಣದಕಲ್, ಪಿ.ಡಿ.ಮದಬಾವಿ, ಎಎಸ್‌ಐ ಬಸವರಾಜ ರಜಾಕನವರ, ವಲಯ ಅರಣ್ಯಾಧಿಕಾರಿ ರಾಕೇಶ ಅರ್ಜುನವಾಡ, ಎಂ.ಕೆ.ಕಾಂಬಳೆ, ಸಿಡಿಪಿಒ ಸಂಜಯಕುಮಾರ ಸದಲಗೆ ಇತರರು ಇದ್ದರು. ಎ.ಕೆ.ಪಾಟೀಲ ನಿರೂಪಿಸಿದರು. ಎಸ್.ಡಿ.ಮುತಾಲಿಕ ವಂದಿಸಿದರು.