

ಇಳಕಲ್ಲ : ಇಲ್ಲಿನ ನಗರಸಭೆಯ 19ನೇ ವಾರ್ಡಿನ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರತ್ನಾ ತಳವಾರ ಪರವಾಗಿ ವೀರಶೈವ ಲಿಂಗಾಯತ ಅಭಿವದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಶುಭ ಶುಕ್ರವಾರ ಅಧಿಕೃತವಾಗಿ ಪ್ರಚಾರಕ್ಕೆ ಚಾಲನೆ ನೀಡಿದರು.
ಈ ವಾರ್ಡಿನ ಸದಸ್ಯ ಶ್ರೀನಿವಾಸ ಸುರಪುರ ಅಕಾಲಿಕ ನಿಧನದಿಂದಾಗಿ ತೆರವಾಗಿರುವ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರತ್ನಾ ಅಮರೇಶ ತಳವಾರ ಅವರಿಗೆ ಮತ ನೀಡಲು ಕೇಳಿಕೊಂಡರು.
ಯಮನೂರಪ್ಪಕಟ್ಟೆಯಿಂದ ಚುನಾವಣಾ ಭಾಷಣ ಆರಂಭಿಸುವ ಮೊದಲು ಮತ ಸದಸ್ಯ ಶ್ರೀನಿವಾಸ ಸುರಪುರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತ ಇದ್ದು ಈ ಸ್ಥಾನವನ್ನು ಗೆಲ್ಲಿಸಿಕೊಟ್ಟರೆ ಪಕ್ಷಕ್ಕೆ ಮತ್ತಷ್ಟು ಬಲ ಬರುತ್ತದೆ ರಾಜ್ಯದಲ್ಲಿ ಎಲ್ಲೆಡೆ ಕಾಂಗ್ರೆಸ್ ಹವಾ ಇದ್ದು ಇಲ್ಲಿಯ ಮತದಾರರು ಸಹ ಕಾಂಗ್ರೆಸ್ ಗ್ಯಾರಂಟಿಗಳನ್ನು ನಂಬಿ ಮತ ಚಲಾಯಿಸಲು ವಿನಂತಿಸಿದರು.
ಕೆಪಿಸಿಸಿ ಸದಸ್ಯ ಶಾಂತಕುಮಾರ ಸುರಪುರ, ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೆಂಕಟೇಶ ಸಾಕಾ, ಪ್ರಧಾನ ಕಾರ್ಯದರ್ಶಿ ಶರಣಪ್ಪ ಆಮದಿಹಾಳ, ಇಳಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲರಜಾಕ ತಟಗಾರ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ, ಸದಸ್ಯರಾದ ಅಮತ ಬಿಜ್ಜಳ ಮತ್ತು ಕಾರ್ಯಕರ್ತರು 19 ನೇ ವಾರ್ಡಿನ ಮತದಾರರ ಮನೆಗೆ ತೆರಳಿ ಮತಯಾಚನೆ ನಡೆಸಿದರು.