

ಗುಂಡ್ಲುಪೇಟೆ: ತಾಲೂಕಿನ ಕೇಂದ್ರ ಸರ್ಕಾರದ ಪುರಸ್ಕೃತ ದರ್ತಿ ಆಬಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ 2024-26 ಯೋಜನೆಯಡಿ ಸೋಮನಪುರ, ತೊಂಡವಾಡಿ ಮತ್ತು ಮದ್ದೂರು ಗ್ರಾಮಗಳು ಆಯ್ಕೆಯಾಗಿರುವ ತಾಲೂಕಿನ ಸೋಮನಪುರ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಬುಧವಾರ ಅಭಿಯಾನ ಕೈಗೊಂಡಿತು.
ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಧಾರ್ ಕಾರ್ಡ್, ಜನಧನ್ ಬ್ಯಾಂಕ್ ಖಾತೆ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗೆ ನೋಂದಣಿ ಮಾಡಲಾಯಿತು.
ಶಿಬಿರದಲ್ಲಿ ಕೊಡಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ದಮ್ಮಣಿ, ಸದಸ್ಯರಾದ ಶ್ರೀನಿವಾಸ್ ಮತ್ತು ದೇವಮ್ಮ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮೋಹನ್‌ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುನಿತಾ, ಬ್ಯಾಂಕ್ ಅಧಿಕಾರಿ ಅಭಿಷೇಕ್, ಆರೋಗ್ಯ, ಕೃಷಿ, ಪಶುಸಂಗೋಪನೆ ಇಲಾಖೆಗಳ ಅಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.