ಸಾರ್ವಜನಿಕರಿಂದ 50 ಲಕ್ಷ ಸಹಿ ಸಂಗ್ರಹ ಅಭಿಯಾನ

ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಗಂಗಾವತಿ ನೆಹರೂ ಪಾರ್ಕ್ ಮುಂದೆ ಎಐಡಿಎಸ್‌ಒ ಜಿಲ್ಲಾ ಸಮಿತಿಯಿಂದ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ಸಮಿತಿ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ರವಿಕಿರಣ್ ಮಾತನಾಡಿದರು. ಜಿಲ್ಲಾ ಸಂಚಾಲಕ ಗಂಗರಾಜ್ ಅಳ್ಳಳ್ಳಿ, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಕೆ.ಸಿಂಧು, ಸದಸ್ಯರಾದ ಸದಾಶಿವ, ಬಾಬು, ದೀಪಾ ಇತರರಿದ್ದರು.

Published on

ಗಂಗಾವತಿ: ಶಿಕ್ಷಣ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಸರ್ಕಾರ ಹುನ್ನಾರ ನಡೆಸಿದೆ ಎಂದು ಎಐಡಿಎಸ್‌ಒ ಸಮಿತಿ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ರವಿಕಿರಣ್ ಹೇಳಿದರು.

ನಗರದ ನೆಹರೂ ಪಾರ್ಕ್ ಮುಂದೆ ಎಐಡಿಎಸ್‌ಒ ಜಿಲ್ಲಾ ಸಮಿತಿಯಿಂದ ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಗುರುವಾರ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದರು. ಈ ಹಿಂದೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ನಿರ್ಧರಿಸಿತ್ತು. ಪ್ರಸ್ತುತ ಕಾಂಗ್ರೆಸ್ ಸರ್ಕಾರ 6 ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ್ದು, ಶಿಕ್ಷಣ ವಿರೋಧಿ ನೀತಿಯಾಗಿದೆ. ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾರ್ವಜನಿಕರಿಂದ 50 ಲಕ್ಷ ಸಹಿ ಸಂಗ್ರಹಿಸಲಾಗುವುದು ಎಂದರು.

ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಮಾತನಾಡಿ, ರಾಜ್ಯದಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ 6 ಸಾವಿರ ಮತ್ತು 7,821 ಶಾಲೆಗಳಲ್ಲಿ ಒಬ್ಬರೆ ಶಿಕ್ಷಕರಿದ್ದಾರೆ. 3500ಕ್ಕೂ ಹೆಚ್ಚು ಶಾಲೆಗಳಲ್ಲಿ ಮೂಲ ಸೌಕರ್ಯಗಳಿಲ್ಲ, ಶಿಕ್ಷಕರ ಹುದ್ದೆ ಖಾಲಿಯಿವೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರ ಯೋಜನೆ ರೂಪಿಸಬೇಕಿದೆ ಎಂದು ತಿಳಿಸಿದರು. ಸರ್ಕಾರಿ ಶಾಲೆಗಳ ಸ್ಥಿತಿಗತಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಶಾಲೆಗಳನ್ನು ಉಳಿಸಿ ಎಂದು ಬಸ್ ನಿಲ್ದಾಣದಲ್ಲಿ ಸಹಿ ಸಂಗ್ರಹಿಸಲಾಯಿತು.

ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಕೆ.ಸಿಂಧು, ಸದಸ್ಯರಾದ ಸದಾಶಿವ, ಬಾಬು, ದೀಪಾ, ದುರುಗಮ್ಮ, ದೇವಮ್ಮ, ರಮೇಶ, ಲಕ್ಷ್ಮಣ, ಶಾಂತಮ್ಮ, ರುದ್ರೇಶ, ಹುಲ್ಲೇಶ್, ಮಲ್ಲೇಶ, ಆಕಾಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net