ನೀರು ಉಳಿಸಲು ಅಭಿಯಾನ : ಎಸ್‌ಕೆಡಿಆರ್‌ಡಿಪಿ ಬಿ.ಸಿ. ಟ್ರಸ್ಟ್ ವತಿಯಿಂದ ಆಯೋಜನೆ

New Project (3)
Published on

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಧರ್ಮಸ್ಥಳ ಯುನಿಸೆಫ್ ಹೈದರಾಬಾದ್ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ಮೀಯರು ಕೆಮ್ಮಟ್ಟೆಯಲ್ಲಿ ನೀರು ಉಳಿಸಿ ಮಹಾ ಅಭಿಯಾನ ಹಮ್ಮಿಕೊಳ್ಳಲಾಯಿತು.

ವಲಯ ಮೇಲ್ವಿಚಾರಕ ಚಿತ್ತರಂಜನ್ ಶುದ್ಧ ನೀರು ಯಾಕೆ ಬೇಕು. ನೀರಿನ ನಿರ್ವಹಣೆಯ ಅವಶ್ಯಕತೆ ಏಕಿದೆ, ಪ್ರಸ್ತುತ ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ನೀರಿನ ಪರಿಸ್ಥಿತಿ ಹೇಗಿದೆ, ನೀರಿನ ಸಂರಕ್ಷಣೆಯಲ್ಲಿ ನಮ್ಮ ಹೊಣೆಗಾರಿಕೆ, ನೀರನ್ನು ಹೇಗೆ ಉಳಿಕೆ ಮಾಡಬಹುದು ಎಂಬ ಮಾಹಿತಿ ನೀಡಿದರು.

ಒಕ್ಕೂಟದ ಅಧ್ಯಕ್ಷೆ ಅಪೂರ್ವ ಜೈನ್ ಮಾತನಾಡಿ, ಪರಿಸರದ ಸಂರಕ್ಷಣೆಯೊಂದಿಗೆ ನೀರು ಉಳಿಸುವುದು ಇಂದಿನ ದಿನದಲ್ಲಿ ಅನಿವಾರ್ಯವಾಗಿದೆ ಎಂದರು. ಪದಾಧಿಕಾರಿ ನಿತಿನ್, ನವೀನ್ ಸೇವಾಪ್ರತಿನಿಧಿ ಚೈತ್ರ, ನವ್ಯ ಹಾಗೂ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net