25 ಕೋಟಿ ರೂ.ವೆಚ್ಚದಲ್ಲಿ ಕಾಳುಮೆಣಸು ಸಂಸ್ಕರಣಾ ಘಟಕ: ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ

campco new
Published on

ಪುತ್ತೂರು: ತಾಲೂಕಿನ ಕಾವು ಎಂಬಲ್ಲಿ ಕ್ಯಾಂಪ್ಕೊ 25 ಕೋಟಿ ರೂ.ವೆಚ್ಚದಲ್ಲಿ ಕಾಳುಮೆಣಸು ಖರೀದಿ ಮತ್ತು ಸಂಸ್ಕರಣಾ ಘಟಕ ಸ್ಥಾಪಿಸುತ್ತಿದ್ದು, ಮುಂದಿನ ಜನವರಿಯಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದರು.

ಕ್ಯಾಂಪ್ಕೊ ಹಾಗೂ ಕ್ಯಾಂಪ್ಕೊ ಚಾಕಲೆಟ್ ಫ್ಯಾಕ್ಟರಿ ವತಿಯಿಂದ ನಿರ್ಮಿಸಲಾಗಿರುವ 500 ಕೆ.ವಿ.ಸೌರ ವಿದ್ಯುತ್ ಉತ್ಪಾದನಾ ಘಟಕ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ಯಾಂಪ್ಕೊ ಕೃಷಿಕರ ಅಭಿವೃದ್ಧಿಗೆ ಪೂರಕವಾಗಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕ್ಯಾಂಪ್ಕೊ ಆನ್‌ವೀಲ್ ಯೋಜನೆ ಕಾರ್ಯಗತ ಗೊಳಿಸಲಿದೆ. ಮುಂದಿನ ಮೂರು ತಿಂಗಳೊಳಗಾಗಿ ಈ ಯೋಜನೆ ಅನುಷ್ಠಾನಗೊಳ್ಳಲಿದ್ದು, ಸಂಸ್ಥೆ ಮನೆಮನೆಗೆ ತೆರಳಿ ಕೃಷಿ ಉತ್ಪನ್ನಗಳನ್ನು ಖರೀದಿಸಲಿದೆ ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸೌರ ವಿದ್ಯುತ್ ಘಟಕ ಉದ್ಘಾಟಿಸಿದರು. ಆರ್ಬ್ ಎನರ್ಜಿ ಕಂಪನಿ ಉಪಾಧ್ಯಕ್ಷ ಸುಧೀಂದ್ರ, ಕ್ಯಾಂಪ್ಕೊ ಮಾಜಿ ಅಧ್ಯಕ್ಷ ಕೊಂಕೋಡಿ ಪದ್ಮನಾಭ, ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ, ಪುತ್ತೂರು ಮೆಸ್ಕಾಂ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಿಲ್ಪಾ ಶೆಟ್ಟಿ, ಸಂಸ್ಥೆಯ ನಿರ್ದೇಶಕರು ಉಪಸ್ಥಿತರಿದ್ದರು. ಕ್ಯಾಂಪ್ಕೊ ಆಡಳಿತ ನಿರ್ದೇಶಕ ಎಚ್.ಎಂ.ಕೃಷ್ಣ ಕುಮಾರ್ ಸ್ವಾಗತಿಸಿದರು. ಅನಿತಾ ಜೆ.ವಂದಿಸಿದರು. ರಾಧೇಶ್ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net