

ಕೋಟ: ಬೇಸಿಗೆ ಶಿಬಿರಗಳು ಎಲ್ಲೆಡೆ ನಡೆಯುತ್ತಿದೆ, ಪ್ರತಿಯೊಂದು ಭಾಗದಲ್ಲೂ ಅರ್ಥಪೂರ್ಣವಾಗಿ ನಡೆಸಲಾಗುತ್ತಿದೆ. ಇಂತಹ ಶಿಬಿರಗಳು ಮಕ್ಕಳ ಮನೋಸ್ಥೈರ್ಯ ಹೆಚ್ಚಿಸಲು ಸಹಕಾರಿ ಎಂದು ಶಿಕ್ಷಕಿ ನಾಗರತ್ನ ಹೇರ್ಳೆ ಅಭಿಪ್ರಾಯಪಟ್ಟರು.
ಕೋಟ ಗ್ರಾಪಂ ಸಭಾಂಗಣದಲ್ಲಿ ಇಂಡಿಕಾ ಕಲಾ ಬಳಗ ಪಡುಕರೆ, ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ, ಕೋಟ ಗ್ರಾಪಂ, ಗೀತಾನಂದ ಫೌಂಡೇಶನ್ ಮಣೂರು, ಡಿಜಿಟಲ್ ಗ್ರಂಥಾಲಯದ ಆಶ್ರಯದಲ್ಲಿ ಬೇಸಿಗೆ ಶಿಬಿರ ಚಿತ್ತಾರ ಚಿಣ್ಣರ ಚಿಲಿಪಿಲಿ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಮೂರು ದಿನಗಳ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ನಾಗರತ್ನಾ ಉಡುಪ, ನಾಗರತ್ನಾ ಹೇರ್ಳೇ, ಪ್ರಜ್ಞಾ ಜಿ.ಹಂದಟ್ಟು, ಯಮುನಾ ಎಲ್.ಕುಂದರ್, ಸುಜಾತ ಗೋಪಾಲ್ ಇವರುಗಳನ್ನು ಗೌರವಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ ಪುಟಾಣಿಗಳಿಗೆ ಪ್ರಮಾಣಪತ್ರ, ಇತರ ಕೊಡುಗೆಯನ್ನು ನೀಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಇಂಡಿಕಾ ಕಲಾ ಬಳಗದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಬಿ.ಶೆಟ್ಟಿ, ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯರಾದ ಅಜಿತ್ ದೇವಾಡಿಗ, ಸುಧಾ ಎ.ಪೂಜಾರಿ, ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಉಪಾಧ್ಯಕ್ಷ ದಿನೇಶ ಆಚಾರ್, ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಇಂಡಿಕಾ ಕಲಾ ಬಳಗದ ಸಂಚಾಲಕ ಸಂತೋಷ್ ಕುಮಾರ್ ಕೋಟ ನಿರೂಪಿಸಿದರು. ಬಳಗದ ಪ್ರಭಾಕರ್ ಸ್ವಾಗತಿಸಿ, ವಂದಿಸಿದರು.