ಶಿಬಿರಗಳಿಂದ ಸದಸ್ಯರಲ್ಲಿ ಕ್ರಿಯಾಶೀಲತೆ ಹೆಚ್ಚಳ

kota.me.13 rotari
Published on

ಕೋಟ: ಶಿಬಿರಗಳ ಮೂಲಕ ರೋಟರಿಯಲ್ಲಿ ಇನ್ನಷ್ಟು ಸಕ್ರಿಯರಾಗಿ ಭಾಗವಹಿಸುವ ಜತೆಗೆ ಕ್ರಿಯಾಶೀಲತೆಯನ್ನು ಹೆಚ್ಚಿಸಿಕೊಳ್ಳಬಹುದು ಎಂದು ವಾಜಿ ಜಿಲ್ಲಾ ಗವರ್ನರ್ ಅಭಿನಂದನ ಶೆಟ್ಟಿ ಹೇಳಿದರು.

ಕೋಟ ಸಾಲಿಗ್ರಾಮ ರೋಟರಿ ಕ್ಲಬ್ ಆಶ್ರಯದಲ್ಲಿ ತೆಕ್ಕಟ್ಟೆ ಪ್ರೆಸಿಡೆಂಟ್ ಹಾಲ್‌ನಲ್ಲಿ ರೋಟರಿ ಜಿಲ್ಲೆ 3182ರ ವ್ಯಾಪ್ತಿಯ ತರಬೇತಿ ಸವಾವೇಶ ‘ವಾಣಿಕ್ಯ’ದಲ್ಲಿ ಮಾತನಾಡಿದರು.

ಜಿಲ್ಲಾ ಗವರ್ನರ್ ಸಿ.ಎ.ದೇವಾನಂದ್ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷ ತಿಮ್ಮ ಪೂಜಾರಿ ಕಾರ್ಯಕ್ರಮ ಆಯೋಜನೆ ಬಗ್ಗೆ ವಾಹಿತಿ ನೀಡಿದರು. ನಿಯೋಜಿತ ಜಿಲ್ಲಾ ಗವರ್ನರ್ ಪಾಲಾಕ್ಷ, ರೋಟರಿ ಸದಸ್ಯ ಬಾಲಕೃಷ್ಣ ಶೆಟ್ಟಿ, ವಾಜಿ ಜಿಲ್ಲಾ ಗವರ್ನರ್ ರಂಗನಾಥ ಭಟ್, ಕೃಷ್ಣ ಶೆಟ್ಟಿ, ಪ್ರಕಾಶ್ ಕಾರಂತ ವಿವಿಧ ವಾಹಿತಿ ಹಂಚಿಕೊಂಡರು. ಜಿಲ್ಲಾ ಕ್ಲಬ್ ವ್ಯಾಪ್ತಿಯ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಜಿಲ್ಲೆಯ 90 ರೋಟರಿ ಕ್ಲಬ್‌ನ 750 ಮಂದಿ ಪದಾಧಿಕಾರಿಗಳು ತರಬೇತಿ ಸವಾವೇಶದಲ್ಲಿ ಭಾಗವಹಿಸಿದ್ದರು.

ಕ್ಲಬ್‌ನ ಕಾರ್ಯದರ್ಶಿ ಚಂದ್ರ ಪೂಜಾರಿ, ಸವಾವೇಶ ಅಧ್ಯಕ್ಷ ರಾಜೇಂದ್ರ ಸುವರ್ಣ ಸೇರಿದಂತೆ ಎಲ್ಲ ಸದಸ್ಯರನ್ನು ಗೌರವಿಸಲಾಯಿತು. ಸಹಾಯಕ ಗವರ್ನರ್ ಶ್ಯಾಮ ಸುಂದರ್ ನಾಯರಿ, ಸತೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಟನಾ ಪ್ರಮುಖ ರಾಜೇಂದ್ರ ಸುವರ್ಣ ಸ್ವಾಗತಿಸಿದರು. ಜಲೇಂದ್ರ ವಂದಿಸಿದರು. ಜಿ.ಎಸ್.ಪ್ರದೀಪ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net