

ಹುಬ್ಬಳ್ಳಿ: ತಾಲೂಕಿನ ವರೂರು ಎ.ಜಿ.ಎಂ.ಆರ್. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಉತ್ತರ ಕರ್ನಾಟಕದ ಭಾಗದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ ಪ್ರತಿಷ್ಠಿತ ಟಿ.ವಿ.ಎಸ್ ಉಪಾಸನಾ ಲಿಮಿಟೆಡ್ ವತಿಯಿಂದ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಯಿತು.
ರಾಷ್ಟ್ರಸಂತ ಆಚಾರ್ಯ ಶ್ರೀ 108 ಗುಣಧರನಂದಿ ಮಹಾರಾಜರು ಹಾಗೂ ಸ್ವಸ್ತಿ ಶ್ರೀ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕ್ಯಾಂಪಸ್ ಡ್ರೈವ್ ನಡೆಯಿತು.
ಎ.ಜಿ.ಎಂ ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್, ಲಕ್ಷ್ಮೇಶ್ವರದ ಅಗಡಿ ಇಂಜಿನಿಯರಿಂಗ್ ಕಾಲೇಜು, ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜು, ಹುಲಕೋಟಿಯ ಆರ್ ಇಸಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
30 ಅಭ್ಯರ್ಥಿಗಳು ಸಂದರ್ಶನದಲ್ಲಿ ಆಯ್ಕೆಯಾಗಿದ್ದಾರೆ. ಟಿವಿಎಸ್ ಕಂಪನಿಯ ತರಬೇತಿ ಅಧಿಕಾರಿ ಶ್ರೀಸತ್ಯಮೂರ್ತಿರಾವ ಮಾತನಾಡಿ, ಮಕ್ಕಳಿಗೆ ಕೌಶಲಕ್ಕೆ ಅನುಗುಣವಾಗಿ ಆಯ್ಕೆ ಪ್ರಕ್ರಿಯೆ ನಡೆಯಬೇಕು ಹಾಗೂ ಅವರ ಕೌಶಲಗಳನ್ನು ಗುರುತಿಸಿ ಅವರಿಗೆ ಉದ್ಯೋಗದಲ್ಲಿ ಅವಕಾಶ ಕಲ್ಪಿಸುವುದು ನಮ್ಮ ಸಂಸ್ಥೆಯು ಮುಖ್ಯ ಗುರಿ ಎಂದರು.
ಎ.ಜಿ.ಎಂ.ಆರ್ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸಂದೀಪ ಕ್ಯಾತನವರ ಹಾಗೂ ಪ್ಲೇಸ್ಮೆಂಟ್ ಆಫೀಸರ್ ಪ್ರೊ. ಅಶ್ವಿನಿ ಪುಟ್ಟಣ್ಣನವರ ನೇತೃತ್ವ ವಹಿಸಿದ್ದರು.