ಕುಮಟಾ: ಇಲ್ಲಿನ ಡಾ. ಎ.ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನ ವೃತ್ತಿ ಮಾರ್ಗದರ್ಶನ ಕೇಂದ್ರ ಮತ್ತು ಎನ್‌ಐಐಟಿ ಮಂಗಳೂರು ಸಹಯೋಗದಲ್ಲಿ ಪದವೀಧರರಿಗೆ ಅ. 1ರಂದು ಬೆಳಗ್ಗೆ 10ರಿಂದ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ.
ಧ್ರಿತಿ ಎಜು ಸರ್ವಿಸ್ ಪ್ರೈವೇಟ್ ಲಿಮಿಟೆಡ್‌ನ ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ, ಅಲ್ಮಾಸನ್ಸ್ ನ ವ್ಯವಹಾರ ವಿಶ್ಲೇಷಕ ಹುದ್ದೆಗಳಿಗೆ, ಎಕ್ಸಿಸ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಸಂದರ್ಶನ ನಡೆಸಲಾಗುವದು. ಯಾವುದೇ ವಿಷಯದಲ್ಲಿ ಶೇ. 50 ಕ್ಕಿಂತ ಹೆಚ್ಚು ಅಂಕಗಳಿಸಿದ ಆಸಕ್ತ ಅಭ್ಯರ್ಥಿಗಳು ಮತ್ತು ಫಲಿತಾಂಶವನ್ನು ನಿರೀಕ್ಷಿಸುತ್ತಿರುವವರು ಸೂಕ್ತ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಡಾ. ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜು ಪ್ರಕಟಣೆ ತಿಳಿಸಿದೆ.