ನಾಲೆ ಅಭಿವೃದ್ಧಿಯಿಂದ ರೈತರಿಗೆ ಅನುಕೂಲ: ಶಾಸಕ ರವಿಕುಮಾರ್ ಗಣಿಗ ಹೇಳಿಕೆ

Canal modernization underway Mandya
Published on

ಮಂಡ್ಯ: ತಾಲೂಕಿನ ಕಚ್ಚಿಗೆರೆ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ 3 ಕೋಟಿ ರೂ ವೆಚ್ಚದಲ್ಲಿ ಮಾಡಲಾಗುತ್ತಿರುವ ಕಚ್ಚಿಗೆರೆ ಮತ್ತು ಹನಕೆರೆ ಪಿಕಪ್ ನಾಲೆ ಮತ್ತು ಮೇಲ್ಭಾಗದ ಸರ್ವೀಸ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವಿಕುಮಾರ್ ಗಣಿಗ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ನಾಲೆ ಆಧುನೀಕರಣ ಹಾಗೂ ರೈತರ ಜಮೀನಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಮುಂದಿನ ದಿನದಲ್ಲಿ ಹಂತ ಹಂತವಾಗಿ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಕಾವೇರಿ ನೀರಾವರಿ ನಿಗಮದ ವತಿಯಿಂದ ನಾಲೆ ಹಾಗೂ ಸರ್ವೀಸ್ ರಸ್ತೆ ಆಧುನೀಕರಣಗೊಳಿಸಲಾಗುತ್ತಿದೆ. ಈ ಮೂಲಕ ನೂರಾರು ರೈತರಿಗೆ ಅನುಕೂಲವಾಗಲಿದೆ. ಮುಖ್ಯವಾಗಿ 500 ಎಕರೆ ಜಮೀನಿಗೆ ನೀರು ಸಮರ್ಪಕವಾಗಿ ಒದಗಿಸುವ ದೃಷ್ಟಿಯಿಂದ ಯೋಜನೆಯನ್ನು ರೂಪಿಸಲಾಗಿದೆ ಎಂದರು.

ಮನ್‌ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ, ಕಾವೇರಿ ನೀರಾವರಿ ನಿಗಮದ ಇಂಜಿನಿಯರ್‌ಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net