ಯುಟಿಪಿ ಕಾಲುವೆ ನೀರಿನಲ್ಲಿ ಬಿದ್ದು ಮೃತಪಟ್ಟ ವ್ಯಕ್ತಿ

Crime Logo
Published on

ರಾಣೆಬೆನ್ನೂರ: ತುಂಗಾ ಮೇಲ್ದಂಡೆ ಯೋಜನೆ ಕಾಲುವೆಗೆ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕುಸಗೂರ ಗ್ರಾಮದ ಬಳಿ ಸೋಮವಾರ ಸಂಭವಿಸಿದೆ.
ಬ್ಯಾಡಗಿ ತಾಲೂಕಿನ ಚಿಕ್ಕಳ್ಳಿ ಗ್ರಾಮದ ಜಮಾಲಸಾಬ ಹಸನಸಾಬ ಚಿಕ್ಕಳ್ಳಿ (40) ಮೃತ ವ್ಯಕ್ತಿ.
ಈತ ಬಿಲ್ಲಳ್ಳಿ ಗ್ರಾಮದ ಬಳಿ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆಯಲ್ಲಿ ಕಾಲು ಜಾರಿ ಬಿದ್ದಿದ್ದ. ಆತನ ಮೃತದೇಹ ಕುಸಗೂರ ಗ್ರಾಮದ ಬಳಿ ದೊರೆತಿದೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net