ಫಾಸ್ಟ್‌ಪುಡ್ ತಯಾರಿಕೆ ತರಬೇತಿ

Rudset
Published on

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯು ಫಾಸ್ಟ್‌ಫುಡ್ ತಯಾರಿಕೆ ಕುರಿತ 10 ದಿನಗಳ ಉಚಿತ ತರಬೇತಿ ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ 18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕ-ಯುವತಿಯರು ಸೆ. 13ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿವರಗಳಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮ್ಯೊ: 9380162042/ 9740982585 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net