ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ರದ್ದುಗೊಳಿಸಿ

Cancel fake Scheduled Caste certificate
Published on

ವಿಜಯಪುರ: ಬೇಡ ಜಂಗಮ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿರುವವರನ್ನು ಪತ್ತೆ ಹಚ್ಚಿ ಕೂಡಲೇ ಅಂತಹ ಪ್ರಮಾಣಪತ್ರ ರದ್ದುಗೊಳಿಸಬೇಕೆಂದು ಛಲವಾದಿ ಸಮಾಜದ ಹಿರಿಯ ಮುಖಂಡ ಚಂದ್ರಶೇಖರ ಕೊಡಬಾಗಿ ಒತ್ತಾಯಿಸಿದರು.

ರಾಜ್ಯದಲ್ಲಿ 587 ಜನರು ನಕಲಿ ಪ್ರಮಾಣ ಪತ್ರ ಪಡೆದಿರುವ ಮಾಹಿತಿ ಇದೆ. ಬೇಡ ಹಾಗೂ ಬುಡುಗ ಜಂಗಮರು ಮೂಲತ@ ಮಾಂಸಾಹಾರಿಗಳು, ಬೇಟೆಯಾಡುವವರು, ಆದರೆ, ಅವರ ಹೆಸರಿನಲ್ಲಿ ವೀರಶೈವರು ಬೇಡ ಜಂಗಮರು ಸುಳ್ಳು ಪ್ರಮಾಣಪತ್ರ ಪಡೆದು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಕೂಡಲೇ ಅಂತಹ ಪ್ರಮಾಣಪತ್ರ ರದ್ದುಗೊಳಿಸಬೇಕೆಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಸರ್ಕಾರಿ ನೌಕರಿ ಸೇರಿ ವಿವಿಧ ಸೌಲಭ್ಯ ಪಡೆಯಲು ಈ ರೀತಿ ಸರ್ಕಾರಕ್ಕೆ ವಂಚಿಸುತ್ತಿರುವುದು ಸರಿಯಲ್ಲ. ಈ ರೀತಿ ಸುಳ್ಳು ದಾಖಲೆ ಸೃಜಿಸಿ ಪರಿಶಿಷ್ಟ ಪಟ್ಟಿಗೆ ಸೇರ್ಪಡೆಯಾಗಿ ನೈಜ ಪರಿಶಿಷ್ಟ ಜಾತಿಗಳಿಗೆ ಅನ್ಯಾಯವೆಸಗುತ್ತಿದ್ದಾರೆ. ಈ ರೀತಿ ಸುಳ್ಳು ಪ್ರಮಾಣಪತ್ರ ಸೃಷ್ಟಿಸುವುದು ಕಾನೂನು ಬಾಹಿರ ಹಾಗೂ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ತಿಳಿಸಿದರು.

ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಈ ರೀತಿ ಸುಳ್ಳು ಪ್ರಮಾಣಪತ್ರ ರದ್ದುಗೊಳಿಸಲು ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಇಲಾಖೆ ಸಚಿವರು ಮುಂದಾಗಬೇಕೆಂದು ಒತ್ತಾಯಿಸಿದರು.

ಛಲವಾದಿ ಮಹಾಸಭಾ ಅಧ್ಯ ಸುನೀಲ ಉಕ್ಕಲಿ, ನಿವೃತ್ತ ಪೊಲೀಸ್​ ಅಧಿಕಾರಿ ಸುಭಾಷ ಗುಡಿಮನಿ, ಸುರೇಶ ದಶವಂತ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net