

ಹುಬ್ಬಳ್ಳಿ : ರಾಜ್ಯ ಸರ್ಕಾರ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದ್ದು, ಈ ಕಾರ್ಯಕ್ಕೆ ತಂತ್ರಜ್ಞಾನ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅರ್ಹರ ಕಾರ್ಡ್ಗಳು ರದ್ದಾಗಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಕಾರ್ಯವನ್ನು ಆಹಾರ ನಿರೀಕ್ಷಕರಿಗೆ ನೀಡಿದರೆ ಅವರು ಜನರನ್ನು ಶೋಷಣೆ ಮಾಡುವ ಸಾಧ್ಯತೆ ಇದೆ ಎಂದರು.
ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸುವುದು ರಾಜ್ಯ ಸರ್ಕಾರದ ಕೆಲಸ. ಅನರ್ಹರ ಕಾರ್ಡ್ಗಳನ್ನು ರದ್ದುಗೊಳಿಸಲು ನಮ್ಮ ಆಕ್ಷೇಪ ಇಲ್ಲ. ಆದರೆ, ಅರ್ಹರಿಗೆ ಅನ್ಯಾಯಬವಾರದು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ 75 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಆದರೆ, ಅವರು ಎಂದಿಗೂ ಜನ್ಮದಿನ ಆಚರಿಸಿಕೊಂಡಿಲ್ಲ. ಈ ಸಂದರ್ಭದಲ್ಲಿ ಸ್ವಸ್ಥ ನಾರಿ- ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸದೃಢ ಭಾರತದ ಅಭಿಯಾನದ ಮೂಲಕ ಆರೋಗ್ಯಯುತ ಸಮಾಜವನ್ನು ನಿಮಾಣ ಮಾಡುವುದು ಪ್ರಧಾನಿ ಅವರ ಮಹತ್ವದ ನಿರ್ಧಾರವಾಗಿದೆ ಎಂದರು.