ಪ್ರಥಮ ಹಂತದಲ್ಲೇ ತಜ್ಞರಿಂದ ತಪಾಸಣೆ : ಡಾ.ಹೃತ್ವಿಕ್ ಸಲಹೆ

New Project (11)
Published on

ಕಡಬ: ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ಮಾಡದೆ ಮೊದಲ ಹಂತದಲ್ಲಿಯೇ ಸೂಕ್ತ ತಜ್ಞ ವೈದ್ಯರಿಂದ ತಪಾಸಣೆ ನಡೆಸಿ ಉತ್ತಮ ಚಿಕಿತ್ಸೆ ಪಡೆದಾಗ ಸಂಪೂರ್ಣ ಗುಣಪಡಿಸಲು ಸಾಧ್ಯವಿದೆ ಎಂದು ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹೃತ್ವಿಕ್ ಅಭಿಪ್ರಾಯಪಟ್ಟರು.

ಸೋಮವಾರ ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ, ಎನ್.ಜಿ. ವರ್ಲ್ಡ್ ಚಾರಿಟೆಬಲ್ ಟ್ರಸ್ಟ್ , ಕಡಬ ಪಪಂ, ಕಡಬ ಸಮುದಾಯ ಆರೋಗ್ಯ ಕೇಂದ್ರ, ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು , ಕಿರಣ್ ಮಹಿಳಾ ತಾಲೂಕು ಒಕ್ಕೂಟ, ಬೆಳ್ತಂಗಡಿ ಸ್ನೇಹಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಹಾಗೂ ಜೀವಜ್ಯೋತಿ ಮಹಾಸಂಘ ಕುಟ್ರುಪಾಡಿ ಆಶ್ರಯದಲ್ಲಿ, ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಮಾನಿನಿ ರಾಜ್ಯ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಜೋನ್ ಕರಪತ್ರ ಅನಾವರಣಗೊಳಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಡಬ ಪಪಂ ದ್ವಿತೀಯ ದರ್ಜೆ ಸಹಾಯಕ ಹರೀಶ್ ಅಧ್ಯಕ್ಷತೆ ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ಬಿನೋಯಿ ಎ.ಜೆ. ಪ್ರಸ್ತಾವಿಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕ ಸುನೀಲ್ ಗೊನ್ಸಾಲ್ವಿಸ್ ಸ್ವಾಗತಿಸಿದರು. ಕಡಬ ಕಿರಣ್ ಮಹಿಳಾ ತಾಲೂಕು ಒಕ್ಕೂಟದ ಉಪಾಧ್ಯಕ್ಷೆ ಗ್ರೇಸಿ ಪಿಂಟೋ ವಂದಿಸಿದರು. ಡಿ.ಕೆ.ಆರ್.ಡಿ.ಎಸ್. ಸಂಸ್ಥೆಯ ಕಾರ್ಯಕರ್ತ ಮಾರ್ಕ್ ಡಿಸೋಜ ನಿರೂಪಿಸಿದರು. ಸಾರ್ವಜನಿಕರಿಗೆ ಕ್ಯಾನ್ಸರ್ ಬಗ್ಗೆ ಕರಪತ್ರ ಹಂಚಲಾಯಿತು. ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗಿಗಳಿಗಾಗಿ ಧನಸಂಗ್ರಹಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net