ಬಿ.ಇಡಿ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ

Published on

ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇನ್ನರ್ವ್ಹೀಲ್ ಕ್ಲಬ್ ಹುಬ್ಬಳ್ಳಿ ಮಿಡ್ ಟೌನ್ ಸಹಯೋಗದಲ್ಲಿ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠ ಕ್ಯಾನ್ಸರ್ ಕುರಿತು ಜಾಗೃತಿ ಕಾರ್ಯಕ್ರಮ ಬುಧವಾರ ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ. ರಾಜೇಶ್ವರಿ ಹುದ್ದಾರ ಅವರು, ಕ್ಯಾನ್ಸರ್ ಕಾಯಿಲೆ ಕುರಿತು ತಿಳಿವಳಿಕೆ ನೀಡಿದರು. ಕ್ಯಾನ್ಸರ್ ತಡೆಗಟ್ಟುವಿಕೆಯ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಲಿಂಗರಾಜ ಮುಳ್ಳಳ್ಳಿ ಅವರು, ಪ್ರಶಿಣಾರ್ಥಿಗಳು ಕ್ಯಾನ್ಸರ್ ಕಾಯಿಲೆ ಬಗ್ಗೆ ತಿಳಿದುಕೊಂಡು ಮುಂದಿನ ದಿನಗಳಲ್ಲಿ ಹೆಣ್ಣುಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಇದರಿಂದ ಕಾಯಿಲೆಯಿಂದ ದೂರ ಇರಲು ಸಹಾಯವಾಗುತ್ತದೆ ಎಂದರು.

ಇನ್ನರ್ವ್ಹೀಲ್ ಕ್ಲಬ್ ಅಧ್ಯಕ್ಷೆ ಶಿಲ್ಪಾ ಶೆಟ್ಟಿ ಅವರು, ಕ್ಲಬ್ ಕಾರ್ಯಚಟುವಟಿಕೆಗಳ ಕುರಿತು ಮಾತನಾಡಿದರು. ಕ್ಲಬ್ ಕಾರ್ಯದರ್ಶಿ ಶೈಲಜಾ ಬಾಗಡೆ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಾಧ್ಯಕ್ಷೆ ಡಾ. ಜಯಶ್ರೀ ಕುಂದಗೋಳಮಠ, ಕೃತಿಕಾ ಭಾವಿಕೇರಿ ಪರಿಚಯಿಸಿದರು. ಪೂಜಾ ಮುದೇನವರ ಕಾರ್ಯಕ್ರಮ ನಿರ್ವಹಿಸಿದರು, ಪ್ರಧಾನ ಕಾರ್ಯದರ್ಶಿ ಪ್ರತಿಕ ಚೂರಿ ವಂದಿಸಿದರು.
ಬೋಧಕ, ಬೋಧಕೇತರ ಸಿಬ್ಬಂದಿ, ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net