

ಬೆಂಗಳೂರು: ಗೋಬಿ ಮಂಚೂರಿ, ಕಬಾಬ್ಗೆ ಬಳಸುವ ಕೃತಕ ಬಣ್ಣವನ್ನು ರಾಜ್ಯ ಸರ್ಕಾರ ಇತ್ತೀಚಿಗಷ್ಟೆ ಬ್ಯಾನ್ ಮಾಡಿತ್ತು. ಗೋಬಿ ಮಂಚೂರಿ, ಕಬಾಬ್ಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಪಾನಿಪುರಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಪಾನಿಪುರಿ ಮಾದರಿಗಳನ್ನ ಸಂಗ್ರಹಿಸಿ ಪರಿಶೀಲನೆ ನಡೆಸಿದೆ. ಪರಿಶೀಲನೆ ವೇಳೆ ಪಾನಿಪೂರಿ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದು ಪತ್ತೆಯಾಗಿದೆ.
ಗೋಬಿ, ಕಬಾಬ್ ಬಳಿಕ ಈಗ ಪಾನಿಪುರಿಗೆ ಬಳಸುವ ಸಾಸ್, ಮೀಟಾ ಖಾರದ ಪುಡಿ ಸೇರಿದಂತೆ ಐದು ಬಗೆಯ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ.