

ಶಿಗ್ಗಾಂವಿ: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ವೀರಪ್ಪ ಸಹದೇವಪ್ಪ ಆಲದಕಟ್ಟಿ (57) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಇವರು ಕ್ಯಾನ್ಸರ್ ಕಾಯಿಲೆ ಇದ್ದಿದ್ದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.