ಶೀಘ್ರ ಅಭ್ಯರ್ಥಿಗಳು ಅಂತಿಮ

21 vikram 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯದಲ್ಲಿನ 3 ಕ್ಷೇತ್ರಗಳ ಉಪಚುನಾವಣೆಯ ಟಿಕೆಟ್​ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಅವರು ಸಚಿವರು ಹಾಗೂ ಡಿಸಿಎಂ ಜತೆಗೆ ಚರ್ಚೆ ನಡೆಸಿದ್ದು, ನಾವೆಲ್ಲ ಅಭಿಪ್ರಾಯ ತಿಳಿಸಿದ್ದೇವೆ. ಇಂದು ಅಥವಾ ನಾಳೆ ಹೈಕಮಾಂಡ್​ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್​ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಸಹ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಆದರೆ ಹೈಕಮಾಂಡ್​ ಕೈಗೊಳ್ಳುವ ತೀರ್ಮಾನವೇ ಅಂತಿಮ ಎಂದು ಸ್ಪಷ್ಟಪಡಿಸಿದರು.

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್​ ಕುರಿತು ಪ್ರತಿಕ್ರಿಯಿಸಿದ ಅವರು, ನನಗೆ ಆ ಭಾಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗೆ ಅಲ್ಲಿನ ಜವಾಬ್ದಾರಿ ಇದೆ. ಹೈಕಮಾಂಡ್​ ಜತೆಗೆ ಮಾತನಾಡಿ ಅವರೇ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತಾರೆ. ಅದರ ಬಗ್ಗೆ ನನಗೆ ಜಾಸ್ತಿ ಮಾಹಿತಿ ಇಲ್ಲ. ಆದರೆ ಈ ಬಾರಿ ಮೂರಕ್ಕೆ ಮೂರು ಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net