ವಿವಿಧ ಒಕ್ಕಲಿಗ ಸಂಘಟನೆಗಳ ವತಿಯಿಂದ ಮೇಣದಬತ್ತಿ ಮೆರವಣಿಗೆ

raised-fist-icon-hand-protest-strike-fight-vector-7513463
Published on

ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆ.3ರಂದು ಗುರುವಾರ ಸಂಜೆ 6 ಗಂಟೆಗೆ ನಗರದಲ್ಲಿ ವಿವಿಧ ಒಕ್ಕಲಿಗ ಸಂಘಟನೆಗಳ ವತಿಯಿಂದ ಮೇಣದಬತ್ತಿ ಮೆರವಣಿಗೆ ಆಯೋಜಿಸಲಾಗಿದೆ ಎಂದು ಸಮುದಾಯದ ಮುಖಂಡ ಸತೀಶ್‌ಗೌಡ ತಿಳಿಸಿದರು.

2012ರ ಅಕ್ಟೋಬರ್‌ನಲ್ಲಿ ಪ್ರಕರಣ ನಡೆದಿದೆ. ಈಗ ರಾಷ್ಟ್ರವ್ಯಾಪಿ ಸುದ್ದಿಯೂ ಆಗುತ್ತಿದೆ. ಪೊಲೀಸರು ಬಂಧಿಸಿದ್ದ ಪ್ರಕರಣದ ಆರೋಪಿ ಸಂತೋಷ್ ರಾಜ್ ಅಪರಾಧಿಯಲ್ಲ ಎಂದು ಸೌಜನ್ಯಾಳ ಪಾಲಕರು ಹೇಳುತ್ತಿದ್ದರೂ ಆತನನ್ನೇ ಕೇಂದ್ರಿಕರಿಸಿ ತನಿಖೆ ನಡೆಸಲಾಯಿತು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ನ್ಯಾಯಾಲಯ ಆತ ನಿಜವಾದ ಆರೋಪಿಯಲ್ಲ ಎಂದು ಹೇಳಿದೆ. ಹೀಗಿರುವಾಗ ನಿಜವಾದ ಆರೋಪಿಗಳು ಬೇರೆ ಯಾರೋ ಇರಲೇಬೇಕು. ಆದ್ದರಿಂದ ಮರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಅಂದು ಅರಮನೆ ಮುಂಭಾಗದಿಂದ ಗಾಂಧಿ ವೃತ್ತದವರೆಗೆ ಕೈಯಲ್ಲಿ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು. ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಮರಿಸ್ವಾಮಿ, ಮುಖಂಡರಾದ ಸುಶೀಲಾ ನಂಜಪ್ಪ, ರಾಜ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net