

ಕಡಬ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸವಣೂರಿನಲ್ಲಿ ಪ್ರತಿಭಟನೆ ನಡೆಯಿತು. ಮಾನವ ಸರಪಳಿ ಮಾಡಿ ಮೊಂಬತ್ತಿ ಉರಿಸಿ ದಾಳಿಯಲ್ಲಿ ಮೃತಪಟ್ಟರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘ ನಿರ್ದೇಶಕ ಪದ್ಮಯ್ಯ ಗೌಡ ಪರಣೆ ತುಳಸೀಪುರ ಮಾತನಾಡಿದರು. ತಾಪಂ ಮಾಜಿ ಉಪಾಧ್ಯಕ್ಷ ದಿನೇಶ್ ಮೆದು, ಸವಣೂರು ಗ್ರಾಪಂ ಅಧ್ಯಕ್ಷೆ ಸುಂದರಿ ಬಿ.ಎಸ್., ಸದಸ್ಯರು, ಸುಳ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ., ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ.ಸವಣೂರು, ಸವಣೂರು ಸಿಎ ಬ್ಯಾಂಕ್ ಅಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕರು, ಕೀರ್ತನ್ ಕೋಡಿಬೈಲು, ರಾಜೇಶ್ ಇಡ್ಯಾಡಿ ವಿವಿಧ ಸಂಘಟನೆಗಳ ಪ್ರಮುಖರು ಚ್ಟ ಪಾಲ್ಗೊಂಡಿದ್ದರು.