

ಕುಶಾಲನಗರ:
ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದಲ್ಲಿ ಜಿಲ್ಲಾ ಪಂಚಾಯತಿ ಅನುದಾನ 3 ಲಕ್ಷ ರೂ. ವೆಚ್ಚದಲ್ಲಿ ನೂತನ ಕಾಲುವೆಯ ನಿರ್ಮಾಣ ಕಾಮಗಾರಿ ಶನಿವಾರದಿಂದ ಆರಂಭವಾಗಿದೆ.
ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡದ ಒಳಗÀಡೆಯಿಂದ ಮಳೆಗಾಲದಲ್ಲಿ ಅಧಿಕವಾಗಿ ಶೀತಾಂಶದ ನೀರು ಹರಿದು ಬರುವುದು ಮತ್ತು ಕೇಂದ್ರದ ಆವರಣ ಸುತ್ತಲೂ ತಳಭಾಗದ ಕಟ್ಟಡದಲ್ಲಿಯೂ ಸಹ ನೀರು ಹರಿದು ಬರುವುದರಿಂದಾಗಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಬಹಳ ತೊಂದರೆ, ಜತೆಯಲ್ಲಿ ಕಟ್ಟಡಕ್ಕೆ ಹಾನಿಯಾಗುತ್ತಿರುವುದು ಗಮನಿಸಿದ ಅರೋಗ್ಯ ಇಲಾಖೆ ಅಧಿಕಾರಿಗಳು ಸಂಬAಧಿಸಿದ ಇಲಾಖೆಯೊಂದಿಗೆ ಪತ್ರವ್ಯವಹಾರ ನಡೆಸಿದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಅನುದಾನ 3 ಲಕ್ಷ ರೂ. ವೆಚ್ಚದಲ್ಲಿ ಆಸ್ಪತ್ರೆಯ ಸುತ್ತಲೂ ನೀರು ಸರಾಗವಾಗಿ ಹರಿಯಲು ಕಾಂಕ್ರೀಟ್ ಕಾಲುವೆ ನಿರ್ಮಾಣದ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.
ಈ ಸಂದರ್ಭ ಸೋಮವಾರಪೇಟೆ ತಾಲೂಕು ಎಂಜಿನಿಯರ್ ಕೀರ್ತನ್ ಕುಮಾರ್, ಗುತ್ತಿಗೆದಾರ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.