ಅರಣ್ಯದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶ

10 HANUR 3
ಬಿಆರ್‌ಟಿಯ ಬಯಲು ಅರಣ್ಯ ಪ್ರದೇಶದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿರುವುದು.
Published on

ಹನೂರು: ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಹೊನ್ನೆಬಾರೆ ಬೆಟ್ಟ ಸಮೀಪದ ಬಯಲು ಅರಣ್ಯ ಪ್ರದೇಶದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಬುಧವಾರ ಅಬಕಾರಿ ಪೊಲೀಸರು ವಶಕ್ಕೆ ಪಡೆದರು.

ಲೊಕ್ಕನಹಳ್ಳಿ ಸಮೀಪದ ಬೂದಿಪಡಗದ ಕೌಳಿಹಳ್ಳ ಡ್ಯಾಂ ಬಳಿ ಅಬಕಾರಿ ನಿರೀಕ್ಷಕ ದಯಾನಂದ್ ಹಾಗೂ ಸಿಬ್ಬಂದಿ ಗಸ್ತು ನಡೆಸುತ್ತಿದ್ದರು. ಈ ವೇಳೆ ದೊರೆತ ಖಚಿತ ಮೇರೆಗೆ ಅಧೀಕ್ಷಕ ವಿವೇಕ್ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಬಯಲು ಅರಣ್ಯ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ನಡೆಸಿದಾಗ ಗಾಂಜಾ ಗಿಡಗಳನ್ನು ಬೆಳೆಸಿರುವುದು ದೃಢವಾಯಿತು. 36 ಕೆ.ಜಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿರುವ ಅಬಕಾರಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net