

ರಾಮನಗರ: ಗಾಂಜಾ ವ್ಯಾಪರಿಗಳ ವಿರುದ್ಧ ರಾಮನಗರ ಜಿಲ್ಲೆಯ ಪೊಲೀಸ್ ಸಹ ಕಾರ್ಯಾಚರಣೆಗೆ ಇಳಿದಿದೆ. ಅದರಲ್ಲು ರಾಮನಗರ ಸುತ್ತ ಮುತ್ತ ನಡೆಯುತ್ತಿದ್ದ ಗಾಂಜಾ ಮಾರಾಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬುಧವಾರ ಸಂಜೆ ಕಾರ್ಯಾಚರಣೆ ನಡೆಸಿರೋ ಟೌನ್ ಪೊಲೀಸರು ಒಬ್ಬ ಆರೋಪಿಯನ್ನ ಬಂಧಿಸಿ 21 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ರಾಮನಗರದ ಜಿಲ್ಲಾ ಕ್ರೀಡಾಂಗಣ ಬಳಿಯ ಹಾಜಿ ನಗರಕ್ಕೆ ಹೋಗುವ ದಾರಿಯಲ್ಲಿ ವ್ಯಕ್ತಿಯೊಬ್ಬ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ಜನನ ಹಿನ್ನೆಲೆಯಲ್ಲಿ ದಾಳಿ ಮಾಡಿದ ಪೊಲೀಸರು ಆರೋಪಿಯನ್ನ ಬಂಧಿಸಿ, ಆತನ ಬಳಿಯಿದ್ದ ೨೧ ಕೆಜಿ ಗಾಂಜಾ ವಶ ಪಡಿಸಿಕೊಂಡಿದ್ದಾರೆ.
ಜಾಲ ಬೇದಿಸುವ ಸಲುವಾಗಿ ವಿಚಾರಣೆಯನ್ನು ಮುಂದುವರಿಸಿದ್ದು, ಆರೋಪಿ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಕಾರ್ಯಾಚರಣೆಯಲ್ಲಿ ಟೌನ್ ಸರ್ಕಲ್ ಇನ್ಸ್‌ಪೆಕ್ಟರ್ ನರಸಿಂಹಮೂರ್ತಿ, ಪಿಎಸ್ ಐಗಳಾದ ಹೇಮಂತ್, ಶುಭಾಂಬಿಕ ಮುಂತಾದವರು ಇದ್ದರು.