

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನ ಸೇತುವೆ ಮೇಲಿಂದ ನದಿಗೆ ಉರುಳಿದ ಘಟನೆ ಸೋಮವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದೆ.
ಚೆನ್ನಮ್ಮನ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಬಳಿಯ ಮಲಪ್ರಭ ನದಿಗೆ ನಿರ್ಮಿಸಿರುವ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಸೇತುವೆಯಲ್ಕಿ ಈ ದುರಂತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಪಘಾತದಲ್ಲಿ ಕ್ಯಾಂಟರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಯಗೊಂಡಿರುವ ಚಾಲಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆ ಕುರಿತು ಚನ್ನಮ್ಮ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.