ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಕ್ಯಾ.ಚೌಟ

mng-3july-nitin gadkari
Published on

ಮಂಗಳೂರು : ದಕ್ಷಿಣ ಕನ್ನಡದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಚರ್ಚಿಸಿದರು. ಶಿರಾಡಿ ಘಾಟಿಯ ಮೂಲಕ ಹಾದುಹೋಗುವ ಮಂಗಳೂರು - ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆ ಮತ್ತು ಸುಗಮಗೊಳಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಈ ಸಂದರ್ಭ ಸಂಸದರು ವಿನಂತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net